ಮಡಿಕೇರಿ, ಡಿ. ೪: ಮಡಿಕೇರಿ ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಪಿ.ಕೆ. ದಿವ್ಯ ಹಾಗೂ ಮಡಿಕೇರಿ ನಗರಸಭಾ ಅಧ್ಯಕ್ಷರಾಗಿ ಚುನಾಯಿತರಾಗಿರುವ ಅನಿತಾ ಪೂವಯ್ಯ ಅವರುಗಳನ್ನು ಸನ್ಮಾನಿಸಲಾಯಿತು. ವಕೀಲರ ದಿನಾಚರಣೆ ಅಂಗವಾಗಿ ಇಲ್ಲಿನ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ಹಿರಿಯ ಸಿವಿಲ್ ನ್ಯಾಯಾಧೀಶ ಸುಬ್ರಮಣ್ಯ, ವಕೀಲರ ಸಂಘದ ಅಧ್ಯಕ್ಷ ಕೆ.ಡಿ. ದಯಾನಂದ, ಉಪಾಧ್ಯಕ್ಷ ರತನ್ ತಮ್ಮಯ್ಯ, ಕಾರ್ಯದರ್ಶಿ ಅರುಣ್ ಕುಮಾರ್, ಹಿರಿಯರಾದ ಸೌಭಾಗ್ಯ ಪೊನ್ನಪ್ಪ, ಸಂಘದ ನಿರ್ದೇಶಕರುಗಳು ಇದ್ದರು.