ಮಡಿಕೇರಿ, ಡಿ. ೫: ಪಾಲೂರು ಗ್ರಾಮದ ವಾರ್ಷಿಕ ಊರೊರ್ಮೆ ಸಮಾರಂಭ ಪಾಲೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಕೊಡವಾಮೆ ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಕೊಡವ ಕುಟುಂಬದ ೩೦೦ಕ್ಕೂ ಹೆಚ್ಚು ಸದಸ್ಯರು ಭಾಗಿಯಾಗಿದ್ದರು. ಇದೇ ವೇಳೆ ೫೦ನೇ ವಿವಾಹ ವಾರ್ಷಿಕೋತ್ಸವ ಆಚರಿಸಿ ಕೊಳ್ಳುತ್ತಿರುವ ಚೆರುವಾಳಂಡ ಮುತ್ತಣ್ಣ ಹಾಗೂ ಗಂಗೆ ದಂಪತಿಯನ್ನು ಸನ್ಮಾನಿಸಲಾಯಿತು. ಮಂದನೆರವAಡ ಸಿ ಕಾವೇರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ನಗರಸಭೆ ಅಧ್ಯಕ್ಷೆಯಾಗಿರುವ ನೆರವಂಡ ಅನಿತಾ ಪೂವಯ್ಯ ಹಾಗೂ ಪ್ರಮುಖರಾದ ಪೊದುವಾಡ ರಾಜ ಪಳಂಗಪ್ಪರವರು ಪಾಲ್ಗೊಂಡಿದ್ದರು.