ಮಡಿಕೇರಿ, ಡಿ. ೫: ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲೂಕು ಯುವ ಒಕ್ಕೂಟ, ಮಡಿಕೇರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮಡಿಕೇರಿ ತಾಲೂಕು ಯುವ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಸಾಬಾ ಸುಬ್ರಮಣಿ ಮಾತನಾಡಿ, ನಮ್ಮ ಸಂವಿಧಾನ ವಿಶ್ವದ ಸಂವಿಧಾನದಲ್ಲಿ ಪ್ರಮುಖವಾಗಿದ್ದು ಪ್ರತಿಯೊಬ್ಬ ಪ್ರಜೆಯು ಅದರ ಘನತೆ, ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಗೌರವಿಸಬೇಕು. ನಾವು ಅದರ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು ಎಂದರು. ಸಂವಿಧಾನ ದಿನದ ಪ್ರತಿಜ್ಞಾ ವಿಧಿಯನ್ನು ರಾಷ್ಟಿçÃಯ ಸೇವಾ ಯೋಜನಾ ಅಧಿಕಾರಿ ನಿರ್ಮಲ ಬೋಧಿಸಿದರು. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ ವಹಿಸಿದ್ದರು. ವೇದಿಕೆಯಲ್ಲಿ ಮಡಿಕೇರಿ ಯುವ ಒಕ್ಕೂಟದ ಅಧ್ಯಕ್ಷ ನವೀನ್ ವಹಿಸಿದ್ದರು. ನೆಹರು ಯುವ ಕೇಂದ್ರ ಸಿಬ್ಬಂದಿ ದೀಪ್ತಿ, ಕಾಲೇಜಿನ ಉಪನ್ಯಾಸಕರಾದ ಡಾ. ಕನ್ನಿಕಾ, ರೇಣುಕಾ ಪ್ರಸಾದ್, ರಾಷ್ಟಿçÃಯ ಸೇವಾ ಕಾರ್ಯಕರ್ತರಾದ ನಸೀರ್, ರಮಿತ್, ವಿದ್ಯಾರ್ಥಿಗಳು ಹಾಜರಿದ್ದರು.