ಮಡಿಕೇರಿ, ಡಿ. ೫: ಸೋಮವಾರಪೇಟೆ ತಾಲೂಕು ತಂಬಾಕು ನಿಯಂತ್ರಣ ಕೋಶ ಇವರ ವತಿಯಿಂದ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ತಹಶೀಲ್ದಾರ್ ಅವರು ತಾಲೂಕು ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಸೂಚಿಸಿದರು. ತಾಲೂಕು ಮಟ್ಟದಲ್ಲಿ ಎಲ್ಲಾ ಸದಸ್ಯರ ಸಹಯೋಗದಲ್ಲಿ ಕೋಟ್ಪಾ ದಾಳಿಗಳನ್ನು ಹಮ್ಮಿಕೊಳ್ಳುವುದು ಹಾಗೂ ತಾಲೂಕಿನ ಎಲ್ಲಾ ಶಾಲೆ ಮತ್ತು ಕಾಲೇಜುಗಳನ್ನು ತಂಬಾಕು ಮುಕ್ತ ವಲಯ ಎಂದು ಘೋಷಿಸಲು ಸೂಚಿಸಿದರು. ಸಭೆಯಲ್ಲಿ ಸಮನ್ವಯ ಸಮಿತಿಯ ಸದಸ್ಯರು ಭಾಗವಹಿಸಿದ್ದರು.