ಮಡಿಕೇರಿ, ಡಿ. ೫: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ೨೦೨೧-೨೨ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸುವಿಧಾ ತಂತ್ರಾAಶದ ಮುಖಾಂತರ ಆನ್‌ಲೈನ್ ಅರ್ಜಿ ಸ್ವೀಕರಿಸಲಾಗುವುದು.

ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ (ನವೀಕರಣ) ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ೨೦೨೧-೨೨ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (೩, ೪, ೫ನೇ ಕಂತುಗಳು) ಸುವಿಧಾ ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. hಣಣಠಿs://suviಜhಚಿ. ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣ ದೊಂದಿಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಸಂಬAಧಿಸಿದAತೆ, ಹೆಚ್ಚಿನ ಮಾಹಿತಿಗೆ ಹಾಗೂ ಸಲ್ಲಿಸಬೇಕಾಗಿ ರುವ ದಾಖಲೆಗಳ ಬಗ್ಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ hಣಣಠಿs://ಞmmಜ. ಞಚಿಡಿಟಿಚಿಣಚಿಞಚಿ.gov.iಟಿ ಜಾಲ ತಾಣದಲ್ಲಿ ಮಾಹಿತಿ ಪಡೆಯಬಹುದು. ಸಾಲ ಸೌಲಭ್ಯ ಪಡೆಯಬಯಸುವವರು ಮಡಿವಾಳ ಸಮುದಾಯದ ಪ್ರವರ್ಗ–೨ಎಗೆ ಸೇರಿದ ಮಡಿವಾಳ ಮತ್ತು ಇದರ ಉಪಜಾತಿಗಳಿಗೆ (ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡ್, ಸಾಕಲವಾಡು) ಸೇರಿದವರಾಗಿರಬೇಕು.

ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ: ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-೨ಎ ಗೆ ಸೇರಿದ ಮಡಿವಾಳ ಮತ್ತು ಇದರ ಉಪಜಾತಿಯವರ ಕುಲಕಸುಬು/ ಸಾಂಪ್ರ ದಾಯಿಕ ವೃತ್ತಿದಾರರಾದ ಧೋಬಿ ಘಟಕ, ಡ್ರೆöÊ ಕ್ಲೀನಿಂಗ್ ಘಟಕಗಳ ಸ್ಥಾಪನೆ, ಇಸ್ತಿçà ಮುಂತಾದ ವೃತ್ತಿ ಕಸುಬುದಾರರು ತಮ್ಮ ವೃತ್ತಿಯ ಅಭಿವೃದ್ಧಿಗಾಗಿ ಆಧುನಿಕ ಉಪಕರಣ ಗಳನ್ನು ಖರೀಧಿಸಲು ತಾಂತ್ರಿಕತೆಯನ್ನು ಮೇಲ್ದರ್ಜೆ ಗೇರಿಸಲು, ವೃತ್ತಿ ಅನುಸಾರ ಗರಿಷ್ಠ ೨ ಲಕ್ಷ ರೂ ವರೆಗೆ ಆರ್ಥಿಕ ನೆರವು. ಇದರಲ್ಲಿ ಗರಿಷ್ಠ ಶೇ. ೧೫ ರಷ್ಟು ಸಹಾಯ ಧನ, ಉಳಿಕೆ ಮೊತ್ತ ಶೇ. ೨ರ ಬಡ್ಡಿ ದರದಲ್ಲಿ ಸಾಲ.

ಸ್ವಯಂ ಉದ್ಯೋಗ ಸಾಲ ಯೋಜನೆ: ಈ ಯೋಜನೆಯ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-೨ಎ ಗೆ ಸೇರಿದ ಮಡಿವಾಳ ಮತ್ತು ಇದರ ಉಪಜಾತಿಯವರು ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ಶೇ. ೧೫ ರಷ್ಟು ಸಹಾಯ ಧನ, ಉಳಿಕೆ ಮೊತ್ತ ಶೇ. ೪ರ ಬಡ್ಡಿ ದರದಲ್ಲಿ ಸಾಲ.