ಮಡಿಕೇರಿ, ಡಿ. ೫: ಸ್ವ-ಸಹಾಯ ಗುಂಪುಗಳ ಆರ್ಥಿಕ ನೆರವು: ಮಡಿವಾಳ ಸಮುದಾಯದ ಮಹಿಳೆಯರು ಕೈಗೊಳ್ಳುವ ಆರ್ಥಿಕ ಚಟುವಟಿಗೆಗಳಿಗೆ ಸ್ವಸಹಾಯ ಗುಂಪುಗಳ ಒಟ್ಟು ೧೫ ಸದಸ್ಯರಿಗೆ ತಲಾ ರೂ. ೫ ಸಾವಿರಗಳ ಸಹಾಯ ಧನ ಹಾಗೂ ತಲಾ ರೂ. ೧೫ ಸಾವಿರ ಸಾಲವನ್ನು ಶೇ. ೪ ರಷ್ಟು ಬಡ್ಡಿ ದರದಲ್ಲಿ ಹೀಗೆ ಪ್ರತಿ ಗುಂಪಿಗೆ ರೂ. ೭೫ ಸಾವಿರ ಸಹಾಯಧನ ಹಾಗೂ ರೂ. ೨,೨೫,೦೦೦ ಗಳ ಸಾಲ ಒಟ್ಟು ರೂ. ೩ ಲಕ್ಷ ಸಾಲ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಹೊಂದಿರಬೇಕಾದ ಸಾಮಾನ್ಯ ಅರ್ಹತೆಗಳು: ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-೨ ಗೆ ಸೇರಿದ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದವರಾಗಿರಬೇಕು. ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮ ಸಾವಿರ, ಪಟ್ಟಣ ಪ್ರದೇಶದವರಿಗೆ ೧.೨೦ ಲಕ್ಷ ರೂ. ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ್ ಕಾರ್ಡ್/ ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿದಾರರು ಐಎಫ್‌ಎಸ್‌ಸಿ. ಕೋಡ್ ಹೊಂದಿರುವ ರಾಷ್ಟಿçÃಕೃತ/ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರಬೇಕು. ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಅರ್ಜಿದಾರರು ನಿಗಮದ ವೆಬ್‌ಸೈಟ್ ತಿತಿತಿ.ಞmmಜ.ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ರಾಡ್ರಿಗಸ್ ಕಟ್ಟಡದ ಎದುರು, ರೇಸ್ ಕೋರ್ಸ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಇಲ್ಲಿ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜನವರಿ, ೧೫ ರೊಳಗೆ ಸಲ್ಲಿಸಬೇಕು ಎಂದು ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.