ಸೋಮವಾರಪೇಟೆ, ಡಿ. ೬: ಹಿಂದೂ ಜಾಗರಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಅಯೋಧ್ಯೆ ಯಲ್ಲಿ ನಡೆದ ಕರಸೇವೆಯಲ್ಲಿ ಭಾಗಿಯಾಗಿದ್ದ ಪಟ್ಟಣದ ಕರಸೇವಕರಿಂದ ಇಲ್ಲಿನ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು.

ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪದಾಧಿಕಾರಿ ಗಳು, ಕರಸೇವೆಯಲ್ಲಿ ಮೃತಪಟ್ಟ ಕಾರ್ಯಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿದರಲ್ಲದೆ, ಅಯೋಧ್ಯೆಯಲ್ಲಿ ಆದಷ್ಟು ಶೀಘ್ರವಾಗಿ ಭವ್ಯ ರಾಮಮಂದಿರ ನಿರ್ಮಾಣವಾಗಲಿ ಎಂದು ಪ್ರಾರ್ಥಿಸಿದರು.

ಕರಸೇವಕರಾದ ಎಸ್.ಪಿ. ಪೊನ್ನಪ್ಪ, ಮಸಗೋಡು ಸುರೇಶ್, ಕಲ್ಕಂದೂರು ಅಪ್ಪಯ್ಯ, ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಸುಭಾಷ್ ತಿಮ್ಮಯ್ಯ, ಜಿಲ್ಲಾ ಸಹ ಸಂಪರ್ಕ ಪ್ರಮುಖ್ ಎಂ.ಬಿ. ಉಮೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಬೋಜೇಗೌಡ, ಜಿ.ಎ. ಉದಯ, ಎಂ.ಸಿ. ರಾಘವ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು. ರಾಮಮಂದಿರ ವಿಜಯೋತ್ಸವ ಹಿನ್ನೆಲೆ ಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಸಿಹಿ ವಿತರಿಸಲಾಯಿತು.