ಮಡಿಕೇರಿ, ಡಿ. ೬: ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ತಾ. ೭ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿರುವ ಯುದ್ಧ ಸ್ಮಾರಕದಲ್ಲಿ ಸಶಸ್ತç ಪಡೆಗಳ ಧ್ವಜ ದಿನಾಚರಣೆ ನಡೆಯಲಿದೆ.
ಕರ್ನಲ್ (ನಿವೃತ್ತ) ಎನ್. ಶರತ್ ಭಂಡಾರಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸೈನಿಕ ಮಂಡಳಿ ಅಧ್ಯಕ್ಷ ಡಾ. ಬಿ.ಸಿ. ಸತೀಶ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಆರ್. ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.