ಅನಿವಾರ್ಯ ಪರಿಸ್ಥಿತಿ ಉಂಟಾದರೆ ಶಾಲೆ ಬಂದ್ : ಶಿಕ್ಷಣ ಸಚಿವ

ಬೆಂಗಳೂರು, ಡಿ. ೬: ರಾಜ್ಯದ ಕೆಲವು ಶಾಲಾ-ಕಾಲೇಜುಗಳಲ್ಲಿ ಅದರಲ್ಲೂ ವಸತಿ ಶಾಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು ಆತಂಕಗೊಳ್ಳುವುದು ಸಹಜ. ಆದರೆ ಮಕ್ಕಳ ಜೀವದ ಜೊತೆ ನಾವು ಚೆಲ್ಲಾಟವಾಡುವುದಿಲ್ಲ, ಕಾಳಜಿ ವಹಿಸುತ್ತೇವೆ. ಆತಂಕಗೊಳ್ಳುವುದು ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಯ ನೀಡಿದ್ದಾರೆ. ಕೊರೊನಾ ಎರಡನೇ ಅಲೆ ಕಡಿಮೆಯಾಗಿ ಎಲ್ಲವೂ ಸಹಜ ಸ್ಥಿತಿಗೆ ಬರುತ್ತಿರುವಾಗ ಇತ್ತೀಚೆಗಷ್ಟೇ ಶಾಲೆಗಳು ಆರಂಭವಾಗಿದ್ದವು. ಈಗ ಮತ್ತೆ ಅಲ್ಲಲ್ಲಿ ಶಾಲಾ-ಕಾಲೇಜು ಮಕ್ಕಳಲ್ಲಿ ಸೋಂಕು ಉಲ್ಭಣವಾಗುತ್ತಿದೆ. ಈ ಬಗ್ಗೆ ಇಂದು ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊರೊನಾ ಸೋಂಕು ಹೆಚ್ಚಳವಾದರೆ ಬದಲಿ ಕ್ರಮ ಏನು ತೆಗೆದುಕೊಳ್ಳಬೇಕೆಂದು ಯೋಚಿಸುತ್ತೇವೆ. ಅಕಸ್ಮಾತ್ ಪರೀಕ್ಷೆ ಮತ್ತು ಭೌತಿಕ ತರಗತಿಗಳನ್ನು ನಿಲ್ಲಿಸಬೇಕೆಂದರೆ ಆ ಕ್ರಮಕ್ಕೂ ಸಿದ್ಧರಿದ್ದೇವೆ ಎಂದರು. ಅಂದರೆ ಅಗತ್ಯಬಿದ್ದರೆ ಶಾಲೆಗಳನ್ನು ನಿಲ್ಲಿಸುವ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಶಿಕ್ಷಣ ಸಚಿವರು ಇಂದು ನೀಡಿದ್ದಾರೆ. ಕೊನೆಯ ದಿನದವರೆಗೂ ಬೆಳವಣಿಗೆಗಳನ್ನು ಗಮನಿಸುತ್ತೇವೆ, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದಾದರೆ ಶಿಕ್ಷಣ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಶಾಲೆಗಳನ್ನು, ಪರೀಕ್ಷೆಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾದರೆ ಹಿಂದೇಟು ಹಾಕುವುದಿಲ್ಲ, ಇವತ್ತಿನ ತಜ್ಞರ ವರದಿಯಲ್ಲಿ ಯಾವುದೇ ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ ಎಂದರು. ಕಳೆದ ವಾರ ಕೊರೊನಾ ಪಾಸಿಟಿವ್ ಬಂದ ಶಾಲೆಗಳ ಮಕ್ಕಳ ಬಗ್ಗೆ ವರದಿ ತರಿಸಿಕೊಂಡಿದ್ದೇವೆ. ಸಕಾಲಕ್ಕೆ ಚಿಕಿತ್ಸೆ ಸಿಕ್ಕಿ ಗುಣಮುಖರಾಗುತ್ತಿದ್ದಾರೆ. ಆದರೂ ಇತ್ತೀಚೆಗೆ ಹಲವು ಶಾಲೆಗಳಲ್ಲಿ ಹತ್ತಾರು ಮಕ್ಕಳಿಗೆ ಸೋಂಕು ಕಾಣಿಸಿ ಕೊಳ್ಳುತ್ತಿರುವುದರಿಂದ ಶಾಲೆಗಳಲ್ಲಿ ಕೋವಿಡ್ ಶಿಷ್ಠಾಚಾರಗಳನ್ನು ಕಠಿಣ ವಾಗಿ ಜಾರಿಗೆ ತರುವ ಬಗ್ಗೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದರು.

ತಜ್ಞರೊAದಿಗೆ ಚರ್ಚಿಸಿ ಬಿಗಿಕ್ರಮ - ಸಿ.ಎಂ

ಹುಬ್ಬಳ್ಳಿ, ಡಿ. ೬: ಕೋವಿಡ್-೧೯ನ ಓಮಿಕ್ರಾನ್ ರೂಪಾಂತರಿ ಭೀತಿಯ ನಡುವೆ ರಾಜ್ಯದಲ್ಲಿ ಮಾಲ್, ಥಿಯೇಟರ್ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಶೇ. ೫೦ ರಷ್ಟು ಮಿತಿ ಜಾರಿಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಓಮಿಕ್ರಾನ್ ಸೇರಿದಂತೆ ಕೋವಿಡ್-೧೯ ಪ್ರಕರಣಗಳಲ್ಲಿ ಗಣನೀಯವಾಗಿ ಏರಿಕೆ ಕಂಡುಬರುತ್ತಿದ್ದು ಇದು ಮೂರನೇ ಅಲೆಗೆ ದಾರಿ ಮಾಡಿಕೊಡಬಹುದಾಗಿದ್ದು, ಸೋಂಕು ಪ್ರಸರಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ ಎಂದು ವಿವರಿಸಿದ್ದಾರೆ.

ಒಪ್ಪಂದಕ್ಕೆ ಭಾರತ - ರಷ್ಯಾ ಸಹಿ

ನವದೆಹಲಿ, ಡಿ. ೬: ಭಾರತ ಮತ್ತು ರಷ್ಯಾ ಸಣ್ಣ ಶಸ್ತಾçಸ್ತçಗಳು ಮತ್ತು ಮಿಲಿಟರಿ ಸಹಕಾರವನ್ನು ಒಳಗೊಂಡ ಹಲವಾರು ಒಪ್ಪಂದಗಳು ಮತ್ತು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ರಕ್ಷಣಾ ಸಚಿವ ಸರ್ಗೆ ಶೋಯಿಗು ಅವರನ್ನು ಭೇಟಿಯಾದ ನಂತರ ತಿಳಿಸಿದ್ದಾರೆ. ಭಾರತಕ್ಕೆ ರಷ್ಯಾದ ಬಲವಾದ ಬೆಂಬಲವನ್ನು ಭಾರತ ಶ್ಲಾಘಿಸುತ್ತದೆ. ನಮ್ಮ ಸಹಕಾರವು ಇಡೀ ಪ್ರದೇಶಕ್ಕೆ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಯನ್ನು ತರುತ್ತದೆ ಎಂದು ನಾವು ಭಾವಿ ಸುತ್ತೇವೆ. ಸಣ್ಣ ಶಸ್ತಾçಸ್ತçಗಳು ಮತ್ತು ಮಿಲಿಟರಿ ಸಹಕಾರಕ್ಕೆ ಸಂಬAಧಿಸಿದAತೆ ಹಲವಾರು ಒಪ್ಪಂದಗಳು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿರುವುದು ಸಂತೋಷ ತಂದಿದೆ ಎಂದು ರಾಜನಾಥ್ ಸಿಂಗ್ ಎಂದು ಟ್ವೀಟ್ ಮಾಡಿದ್ದಾರೆ. ಭಾರತ ಮತ್ತು ರಷ್ಯಾ ನಡುವಿನ ಸಂಬAಧಗಳ ಪ್ರಾಮುಖ್ಯ ತೆಯನ್ನು ಒತ್ತಿಹೇಳಿರುವ ರಾಜನಾಥ್ ಸಿಂಗ್ ಅವರು, ರಕ್ಷಣಾ ಸಹಕಾರವು ದ್ವಿಪಕ್ಷೀಯ ಪಾಲುದಾರಿಕೆಯ ಪ್ರಮುಖ ಸ್ತಂಭಗಳಲ್ಲಿ ಒಂದಾಗಿದೆ ಎಂದಿದ್ದಾರೆ.