ಮಡಿಕೇರಿ, ಡಿ. ೬: ಸ್ವಾತಂತ್ರö್ಯ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯಲ್ಲಿ ‘ನದಿ ಉತ್ಸವ’ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ ಬಿ.ಸಿ. ಸತೀಶ ಅವರು ಕೋರಿದರು.
ಕಾವೇರಿ ನೀರಾವರಿ ನಿಗಮ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನದಿ ಉತ್ಸವ ಆಚರಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಹಾಗೂ ವಿವಿಧ ಸಂಸ್ಥೆಗಳ ಪ್ರಮುಖರ ಜೊತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನದಿ ಉತ್ಸವ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳು ತೊಡಗಿಸಿಕೊಳ್ಳುವಂತಾಗಬೇಕು. ನದಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಲಹೆ, ಮಾರ್ಗದರ್ಶನ ಅತ್ಯಗತ್ಯ ಎಂದರು.
ಸಭೆಯ ಆರಂಭದಲ್ಲಿ ಮಾತನಾಡಿದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ನಾಗೇಶ್ ಉತ್ಸವದ ಬಗ್ಗೆ ಮಾಹಿತಿ ನೀಡಿದರು.
ಕಾವೇರಿ ನದಿ ಜಾಗೃತಿ ವೇದಿಕೆ ಅಧ್ಯಕ್ಷ ಚಂದ್ರಮೋಹನ್ ಅವರು ಭಾಗಮಂಡಲದಿAದ ಶಿರಂಗಾಲದ ವರೆಗೆ ೨೩ ಗ್ರಾ.ಪಂ. ಹಾಗೂ ಒಂದು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಗಳು ನದಿ ಉತ್ಸವದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಅವರಿಗೆ ಮಾಹಿತಿ ನೀಡುವಂತಾಗಬೇಕು. ಪ್ರತೀ ವರ್ಷ ನದಿ ಉತ್ಸವ ಹಮ್ಮಿಕೊಳ್ಳಬೇಕು. ವಿವಿಧ ಧರ್ಮದ ಸ್ವಾಮೀಜಿಗಳನ್ನು ಆಹ್ವಾನಿಸಬೇಕು ಎಂದರು.
ಹೋA ಸ್ಟೇ ಅಸೋಷಿಯೇನ್ನ ಬಿ.ಜಿ. ಅನಂತಶಯನ ಮಾತನಾಡಿ, ನದಿ ಉತ್ಸವ ಸಂಬAಧ ವಿವಿಧ ಕಾರ್ಯಚಟುವಟಿಕೆಗಳಿಗೆ ಅಧಿಕಾರಿ ಗಳನ್ನು ನಿಯೋಜಿಸು ವಂತಾಗಬೇಕು. ಕೊಡವ ಮತ್ತು ಗೌಡ ಸಮಾಜಗಳ ಪ್ರಮುಖರನ್ನು ಆಹ್ವಾನಿಸಬೇಕು ಎಂದು ಅವರು ಸಲಹೆ ನೀಡಿದರು.
ಮೋಂತಿ ಗಣೇಶ್ ಮಾತನಾಡಿ, ಬೈಕ್ ರ್ಯಾಲಿ ಬದಲಿಗೆ ತಲಕಾವೇರಿ ಯಿಂದ ಭಾಗಮಂಡಲದವರೆಗೆ ಅವರವರ ವಾಹನದಲ್ಲಿಯೇ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಬೇಕು. ಕೋವಿಡ್ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಗಳ ಅಗತ್ಯವಿದೆಯೇ ಎಂಬ ಬಗ್ಗೆ ಚಿಂತಿಸಬೇಕಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರು ನದಿ ಉತ್ಸವ ಕಾರ್ಯಕ್ರಮದಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳು ವಂತಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಭಾಗಮಂಡಲದಿAದ ಕುಶಾಲನಗರದವರೆಗೆ ಕಾವೇರಿ ನದಿ ಪಾತ್ರದಲ್ಲಿ ಆಯಾಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಎನ್ಸಿಸಿ ಅಧಿಕಾರಿ ರಾಘವ ಅವರು ಸಂತೆ ಹಾಗೂ ಜನದಟ್ಟಣೆ ಪ್ರದೇಶದಲ್ಲಿ ನದಿ ಸಂರಕ್ಷಣೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಕೋರಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ, ಕಾವೇರಿ ನದಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಆ ನಿಟ್ಟಿನಲ್ಲಿ ಕಾವೇರಿ ನದಿ ಪಾತ್ರದ ಗ್ರಾ.ಪಂ.ಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ತಿಳಿಸಿದರು.
ರೋಟರಿ ಕ್ಲಬ್ನ ಉಪ ರಾಜ್ಯಪಾಲ ಅನಿಲ್ ಎಚ್.ಟಿ. ಅವರು ರೋಟರಿ ಕ್ಲಬ್ ವತಿಯಿಂದ ನದಿ ಪಾತ್ರದಲ್ಲಿ ನದಿ ಸಂರಕ್ಷಣೆ ಸಂಬAಧಿಸಿ ದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಕಾವೇರಿ ನದಿ ಪಾತ್ರದಲ್ಲಿ ಸ್ವಚ್ಛತೆ ಕಾಪಾಡುವುದು, ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ರೆಡ್ಕ್ರಾಸ್ ಸಂಸ್ಥೆಯ ಮುರಳೀಧರ ಅವರು ಯೂತ್ ರೆಡ್ಕ್ರಾಸ್ನ ಸ್ವಯಂ ಸೇವಕರು ನದಿ ಸಂರಕ್ಷಣೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು.
ಪ್ರಮುಖರಾದ ಎಂ.ಬಿ. ದೇವಯ್ಯ ಮಾತನಾಡಿ, ತಲಕಾವೇರಿ, ಭಾಗಮಂಡಲ ದೇವಾಲಯ ಪ್ರಾಮುಖ್ಯತೆ ಮತ್ತು ಪಾವಿತ್ರö್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು. ಕಾವೇರಿಯು ಸಪ್ತ ನದಿಗಳಲ್ಲಿ ಒಂದಾಗಿದ್ದು, ನದಿ ಪಾತ್ರದ ಇಕ್ಕೆಲಗಳಲ್ಲಿ ಕೊಳಚೆ ನೀರು ಹರಿಸುವುದನ್ನು ತಡೆಯಬೇಕು. ಆ ನಿಟ್ಟಿನಲ್ಲಿ ಈ ಬಗ್ಗೆ ತುರ್ತು ಕ್ರಮವಹಿಸಬೇಕಿದೆ ಎಂದರು.
ಭಾಗಮಂಡಲವನ್ನು ‘ಟೆಂಪಲ್ ಟೌನ್’ ಎಂದು ಪ್ರಕಟಿಸಬೇಕು. ಪ್ರವಾಸಿ ಸ್ಥಳದಿಂದ ಕೈಬಿಡಬೇಕು. ಭಾಗಮಂಡಲ ಮತ್ತು ತಲಕಾವೇರಿ ಯಲ್ಲಿ ವಸ್ತçಸಂಹಿತೆ ಪಾಲಿಸಬೇಕು. ಆ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಸಲಹೆ ನೀಡಿದರು.
ಈ ಕುರಿತು ಪ್ರತಿಕ್ರಿಯಿಸಿದ ಡಾ.ಬಿ.ಸಿ.ಸತೀಶ ಅವರು ‘ಟೆಂಪಲ್ ಟೌನ್’ ಪ್ರಕಟಿಸುವ ಸಂಬAಧ ಮುಜರಾಯಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ನದಿ ಪಾತ್ರದಲ್ಲಿ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ನದಿ ಉತ್ಸವ ಅರ್ಥಪೂರ್ಣ ವಾಗಿ ಆಚರಿಸುವ ನಿಟ್ಟಿನಲ್ಲಿ ಉಪ ಸಮಿತಿಯನ್ನು ರಚಿಸಲು ನಿರ್ಧರಿಸಲಾಯಿತು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಕೊಡಗು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ, ನಿವೃತ್ತ ಕರ್ನಲ್ ಭರತ್, ಪ್ರಮುಖರಾದ ವನಿತಾ ಚಂದ್ರಮೋಹನ್ ಸೀಮಾ ತ್ರಿಪಾಟಿ, ಉಪ ಅರಣ್ಯಸಂರಕ್ಷಣಾಧಿಕಾರಿ ಪಾಷಾ, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ತಲಕಾವೇರಿ-ಭಾಗಮಂಡಲ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಪ್ಪ, ತಹಶೀಲ್ದಾರ್ ಮಹೇಶ್, ಗೋವಿಂದರಾಜು, ಸ್ಕೌಟ್ಸ್ ಮತ್ತು ಗೈಡ್ಸ್ನ ದಮಯಂತಿ ಅವರು ಸಲಹೆ ನೀಡಿದರು.