ಮಡಿಕೇರಿ, ಡಿ. ೬: ವಿಧಾನ ಪರಿಷತ್ ಚುನಾವಣೆಯನ್ನು ನ್ಯಾಯ ಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವಂತೆ ಚುನಾವಣೆಗೆ ನಿಯೋಜನೆಗೊಂಡಿರುವ ಪ್ರಿಸೈಡಿಂಗ್ ಮತ್ತು ಪೋಲಿಂಗ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ನಿರ್ದೇಶನ ನೀಡಿದ್ದಾರೆ.

ನಗರದ ಸಂತ ಜೋಸೆಫರ ಶಾಲಾ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಸಂಬAಧ ಪ್ರಿಸೈಡಿಂಗ್ ಮತ್ತು ಪೋಲಿಂಗ್ ಅಧಿಕಾರಿಗಳು ಹಾಗೂ ಪಿಡಿಒಗಳಿಗೆ ನಡೆದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸುಗಮ ಹಾಗೂ ಸುವ್ಯವಸ್ಥಿತವಾಗಿ ಚುನಾವಣೆ ನಡೆಸಲು ಅಗತ್ಯ ಕ್ರಮವಹಿಸಬೇಕು. ಚುನಾವಣೆ ಯಲ್ಲಿ ಪ್ರಿಸೈಡಿಂಗ್ ಅಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳ ಪಾತ್ರ ಬಹುಮುಖ್ಯವಾಗಿದೆ.

ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿ, ನಗರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಸದಸ್ಯರು, ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಮತ ಹಕ್ಕು ಚಲಾಯಿಸಲಿದ್ದಾರೆ ಎಂದರು.

ಮತದಾರರಿಗೆ ಮತದಾನ ಮಾಡುವ ಬಗ್ಗೆ ಜಾಗೃತಿಯನ್ನು ಸಂಬAಧಪಟ್ಟ ಪಿಡಿಒಗಳು, ಕಾರ್ಯದರ್ಶಿಗಳು ಕಡ್ಡಾಯವಾಗಿ ಮಾಡಿಸಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬಾರದು. ಚುನಾವಣೆಯ ಮತದಾನವೂ ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದ್ದು, ಈ ಚುನಾವಣಾ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆದು ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಡಾ. ಬಿ.ಸಿ. ಸತೀಶ ನಿರ್ದೇಶನ ನೀಡಿದರು.

ಚುನಾವಣೆ ಪ್ರಕ್ರಿಯೆ ಬಗ್ಗೆ ಯಾವುದಾದರೂ ಗೊಂದಲಗಳಿದ್ದಲ್ಲಿ, ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಮತದಾನದ ಗೌಪ್ಯತೆಯನ್ನು ಕಾಪಾಡಿ ತಮ್ಮ ಜವಾಬ್ದಾರಿ ಮತ್ತು ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

‘ಕೊಡಗು ಜಿಲ್ಲೆಯಲ್ಲಿ ೧೦೩ ಗ್ರಾಮ ಪಂಚಾಯಿತಿ ಕಚೇರಿಗಳು (ಪೊನ್ನಂಪೇಟೆ ಗ್ರಾ.ಪಂ. ಹೊರತು ಪಡಿಸಿ) ಪೊನ್ನಂಪೇಟೆ ತಾಲೂಕು ಪಂಚಾಯಿತಿ ಕಚೇರಿ, ಮಡಿಕೇರಿ ನಗರಸಭೆ ಕಾವೇರಿ ಕಲಾಕ್ಷೇತ್ರ, ಪಟ್ಟಣ ಪಂಚಾಯಿತಿ, ಕುಶಾಲನಗರ, ಸೋಮ ವಾರಪೇಟೆ ಮತ್ತು ವೀರಾಜಪೇಟೆ ಇಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಮಾತನಾಡಿ, ಮತದಾನ ಮಾಡುವ ವಿಧಾನ, ಪರಿಶೀಲನೆ, ಪ್ರಾಶಸ್ತ್ಯ ಕ್ರಮಸಂಖ್ಯೆ ಬರೆಯುವ ಬಗ್ಗೆ ಮಾಹಿತಿ ನೀಡಿದರು. ಮತ ಚಲಾಯಿಸುವವರು ಮತಗಟ್ಟೆಯಲ್ಲಿ ನೀಡುವ ನೇರಳೆ ಬಣ್ಣದ ಮಾರ್ಕರ್ ಪೆನ್ನಿನ ಮೂಲಕವೇ ಮತಹಕ್ಕು ಚಲಾಯಿಸಬೇಕು ಎಂದು ಅವರು ತಿಳಿಸಿದರು.

ಮತದಾರರು ಅನಕ್ಷರಸ್ಥರು, ಅಂಗ ನ್ಯೂನ್ಯತೆ, ದುರ್ಬಲರಾಗಿದ್ದವರಿಗೆ ೧೮ ವರ್ಷ ಮೇಲ್ಪಟ್ಟ ವ್ಯಕ್ತಿಯ ಸಹಾಯ ಪಡೆಯಬಹುದು. ಮತದಾರರಿಗೆ ನೆರವಾಗುವ ಸಂಬAಧಪಟ್ಟ ಜೊತೆಗಾರರು ಇನ್ನೊಬ್ಬ ಸದಸ್ಯರಿಗೆ ಅಥವಾ ಮತದಾರರಿಗೆ ಜೊತೆಗಾರ ರಾಗಬಾರದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ವಿವರಿಸಿದರು.

ಚುನಾವಣೆಗೆ ನಿಯೋಜಿಸಿರುವ ಅಧಿಕಾರಿಗಳು ಮತದಾನದ ಹಿಂದಿನ ದಿನ, ತಮಗೆ ತಿಳಿಸಿದ ಸ್ಥಳ ಮತ್ತು ಸಮಯದಲ್ಲಿ ಹಾಜರಿರಬೇಕು. ಚುನಾವಣಾ ಸಾಮಗ್ರಿಗಳ ಪರಿಶೀಲನೆ ಪಟ್ಟಿಯಂತೆ ಸಾಮಗ್ರಿಗಳನ್ನು ಪಡೆದುಕೊಳ್ಳಬೇಕು.

ತಮಗೆ ನೀಡಿರುವ ಮತದಾರರ ಪಟ್ಟಿ, ಮತಪತ್ರಗಳು ತಮ್ಮ ಕ್ಷೇತ್ರಕ್ಕೆ ಸಂಬAಧಪಟ್ಟದೆAದು ಪರಿಶೀಲಿಸಿ ಕೊಳ್ಳಬೇಕು. ಜೊತೆಗೆ ಪ್ರತಿಯೊಂದು ಮತಪತ್ರಗಳನ್ನು ಮತ್ತು ಅನುಕ್ರಮ ಸಂಖ್ಯೆಗಳನ್ನು ಪರಿಶೀಲಿಸಿ ಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.

ಚುನಾವಣಾ ತರಬೇತಿದಾರರು ಹಾಗೂ ಭಾಗಮಂಡಲ ಕಾವೇರಿ ಕಾಲೇಜಿನ ಪ್ರಾಂಶುಪಾಲ ಕೆ.ಜೆ. ದಿವಾಕರ ಅವರು ವಿಧಾನ ಪರಿಷತ್ ಚುನಾವಣೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಚುನಾವಣೆ ಪೂರ್ವ ಸಿದ್ಧತೆ, ಚುನಾವಣಾ ದಿನ ತೆಗೆದುಕೊಳ್ಳ ಬೇಕಾದ ಕ್ರಮಗಳು, ಕಾಗದಪತ್ರ, ಮತ ಪೆಟ್ಟಿಗೆ, ಮೊಹರು ಇತರೆ ಚುನಾವಣಾ ನಂತರದ ಪ್ರಕ್ರಿಯೆ ಮತ್ತು ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಮತಗಟ್ಟೆಗಳಿಗೆ ನಿಯೋಜನೆ ಗೊಂಡ ಅಧಿಕಾರಿಗಳು ಮತದಾನ ಪ್ರಕ್ರಿಯೆಗೆ ಬೇಕಾದ ಚುನಾವಣಾ ಸಾಮಗ್ರಿಗಳನ್ನು ಪರಿಶೀಲಿಸಿ ಪಡೆದುಕೊಳ್ಳಬೇಕು. ಮಸ್ಟರಿಂಗ್ ಮತ್ತು ‘ಡಿ’ ಮಸ್ಟರಿಂಗ್ ಸಮಯದಲ್ಲಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರ್ ಮಹೇಶ್, ಚುನಾವಣೆಗೆ ನಿಯೋಜನೆ ಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇತರರು ಇದ್ದರು.