ಕೂಡಿಗೆ, ಡಿ. ೭: ಮೈಸೂರಿನ ಓಡಿಪಿ ಸಂಸ್ಥೆ ಮತ್ತು ಅಂದೇರಿ ಹಿಲ್ಲೆ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ರೈತರಿಗೆ ಅರಿವು ನೀಡುವ ಕಾರ್ಯಕ್ರಮ ಕೂಡಿಗೆಯ ಗಣಪತಿ ಫೆಂಡಾಲ್ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡಿಗೆಯಲ್ಲಿರುವ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ಪ್ರಕಾಶ್ ನೆರವೇರಿಸಿದರು. ನಂತರ ಮಾತನಾಡಿದ ಅವರು, ಸ್ವಯಂ ಉದ್ಯೋಗ ತರಬೇತಿ ಮತ್ತು ವಿವಿಧ ಯೋಜನೆಗಳ ಬಗ್ಗೆ ಸಂಸ್ಥೆಯ ವತಿಯಿಂದ ತರಬೇತಿ ನೀಡಲಾಗುತ್ತದೆ. ಉದ್ಘಾಟನೆಯನ್ನು ಕೂಡಿಗೆಯಲ್ಲಿರುವ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ಪ್ರಕಾಶ್ ನೆರವೇರಿಸಿದರು. ನಂತರ ಮಾತನಾಡಿದ ಅವರು, ಸ್ವಯಂ ಉದ್ಯೋಗ ತರಬೇತಿ ಮತ್ತು ವಿವಿಧ ಯೋಜನೆಗಳ ಬಗ್ಗೆ ಸಂಸ್ಥೆಯ ವತಿಯಿಂದ ತರಬೇತಿ ನೀಡಲಾಗುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನಾ, ಹೆಚ್.ಎಂ. ರಘು ಮಾತನಾಡಿದರು.

ಸಂಸ್ಥೆಯ ನೋಂದಾಯಿತ ರೈತರುಗಳಿಗೆ ಬೇವಿನ ಹಿಂಡಿ ಗೊಬ್ಬರವನ್ನು ವಿತರಣೆ ಮಾಡಲಾಯಿತು. ಈ ಸಂದರ್ಭ ಭೂಮಿಕ ರೈತ ಉತ್ಪಾದನಾ ಸಮಿತಿ ಅಧ್ಯಕ್ಷ ಹೊನ್ನಪ್ಪ, ಕಾರ್ಯದರ್ಶಿ ವರದರಾಜ್ ದಾಸ್, ಮಮತಾ, ಸುಂದರದಾಸ್ ಸೇರಿದಂತೆ ರೈತರು ಭಾಗವಹಿಸಿದ್ದರು.