ಮಡಿಕೇರಿ, ಡಿ. ೭: ಕೊರೊನಾ ವೈರಾಣುವಿನ ರೂಪಾಂತರ ತಳಿ ಓಮಿಕ್ರಾನ್ ಸೋಂಕು ಹರಡುತ್ತಿರುವ ಹಿನ್ನೆಲೆ, ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಸಂಶೋಧನಾ ಸಂಸ್ಥೆಯ ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಓಮಿಕ್ರಾನ್ ಅಲ್ಲಲ್ಲಿ ಹರಡುತ್ತಿರುವ ಹಿನ್ನೆಲೆ ಅಗತ್ಯ ಮುನ್ನೆಚ್ಚರ ವಹಿಸ ಬೇಕು. ಜೊತೆಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು. ಕೋವಿಡ್-೧೯ ಪರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಬೇಕು. ಕೋವಿಡ್-೧೯ ಪಾಸಿಟಿವ್ ಬಂದಲ್ಲಿ ತಕ್ಷಣವೇ ಆರೋಗ್ಯ ಸೇವೆ ಕಲ್ಪಿಸುವುದು, ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಉಂಟಾಗದAತೆ ಗಮನಹರಿಸುವಂತೆ ನಿರ್ದೇಶನ ನೀಡಿದರು. ೧೮ ವರ್ಷ ಮೇಲ್ಪಟ್ಟವರೆಲ್ಲರೂ ಪ್ರಥಮ ಮತ್ತು ದ್ವಿತೀಯ ಡೋಸ್ ಪಡೆಯಲು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ. ಬಿ.ಸಿ. ನವೀನ್ ಕುಮಾರ್ ಅವರು ಮಾತನಾಡಿ ಕೋವಿಡ್-೧೯ ಮೂರನೇ ಅಲೆ ಕೇಳಿಬರುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಔಷಧಿ ಹಾಗೂ ಮೂಲ ಸೌಲಭ್ಯ ಸಿದ್ಧತೆ ಮಾಡಿಕೊಳ್ಳಬೇಕು.

ಓಮಿಕ್ರಾನ್ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೊಡಗು ವೈದ್ಯಕೀಯ ವಿಜ್ಞಾನ ಸಂಶೋಧನಾ ಕೇಂದ್ರವಾಗಿರುವುದರಿAದ ಹೆಚ್ಚಿನ ಸಂಶೋಧನೆಗಳು ನಡೆಯಬೇಕು. ನರ ರೋಗ, ಕಿಡ್ನಿ, ಹೃದಯ, ಕರುಳು ಹೀಗೆ ಹಲವು ಖಾಯಿಲೆಗಳ ಸಂಬAಧ ತಜ್ಞ ವೈದ್ಯರನ್ನು ಆಹ್ವಾನಿಸಿ, ಆರೋಗ್ಯ ಸೇವೆ ಕಲ್ಪಿಸಬೇಕು. ಬಡ ಜನರು ಆಯುಷ್ಮಾನ್ ಆರೋಗ್ಯ ಕರ್ನಾಟಕ ಕಾರ್ಡ್ ಮೂಲಕ ಹೆಚ್ಚಿನ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗುತ್ತದೆ. ಜೊತೆಗೆ ಹತ್ತಿರದ ಜಿಲ್ಲೆಗಳಿಗೆ ಹೋಗುವುದು ತಪ್ಪುತ್ತದೆ ಎಂದು ಅವರು ತಿಳಿಸಿದರು.

ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ಆಡಳಿತಾಧಿಕಾರಿ ಡಾ. ನಂಜುAಡೇಗೌಡ, ವೈದ್ಯಕೀಯ ಅಧೀಕ್ಷಕ ಡಾ. ಮಂಜುನಾಥ್, ಡಾ. ಲೋಕೇಶ್, ಸೂಕ್ಷಾö್ಮಣು ಜೀವಿ ವಿಭಾಗದ ಮುಖ್ಯಸ್ಥೆ ಡಾ. ನಜೀಮ, ಜಿಲ್ಲಾ ಲಸಿಕಾ ಅಧಿಕಾರಿ ಡಾ. ಗೋಪಿನಾಥ್, ಡಾ. ರೂಪೇಶ್, ಡಾ. ಅಜೀಜ್, ಡಾ. ಆನಂದ್, ಡಾ. ಪ್ರವೀಣ್, ಡಾ. ಪ್ರದೀಪ್, ಡಾ. ಕುಶ್ವಂತ್, ಡಾ. ಶ್ವೇತಾ ಇತರರು ಕೋವಿಡ್-೧೯ ನಿರ್ವಹಣೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.