ಪೆರಾಜೆ, ಡಿ. ೭: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರಂತೋಡು ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಅರೆಭಾಷೆ ಸಾಹಿತ್ಯಕ್ಕೆ ಸಂಬAಧಿಸಿದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಪುಸ್ತಕಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭ ಅರಂತೋಡು ಪಂಚಾಯಿತಿ ಅಧ್ಯಕ್ಷೆ ಹರಿಣಿ, ಉಪಾಧ್ಯಕ್ಷೆÀ ಶ್ವೇತ, ಪುಷ್ಪಾಮೇದಪ್ಪ , ಅಕಾಡೆಮಿಯ ಸದಸ್ಯರಾದ ಕುಸುಮಾಧರ ಎ.ಟಿ, ಪುರುಷೋತ್ತಮ ಕಿರ್ಲಾಯ, ಕಿರಣ್ ಕುಂಬಳಚೇರಿ, ಪಂಚಾಯಿತಿ ಸಿಬ್ಬಂದಿಗಳು, ಗ್ರಾಮಸ್ಥರು ಇದ್ದರು.