ನಾಪೋಕ್ಲು, ಡಿ. ೭: ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸರ್ವತೋಮುಖ ಅಭಿವೃದ್ಧಿಯನ್ನು ಹೊಂದಲು ಜ್ಞಾನ ವಿಕಾಸ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲೆಯ ನಿರ್ದೇಶಕ ಡಾ. ಯೋಗೀಶ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾಟೆಕಾಡು ಗ್ರಾಮದಲ್ಲಿ ಮಾತೃಶ್ರೀ ಜ್ಞಾನ ವಿಕಾಸ ಕೇಂದ್ರವನ್ನು ಉದ್ಘಾಟಿಸಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಿಳೆಯರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಡಲಾಗುತ್ತಿದೆ ಎಂದರು.
ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಇಂತಹ ಕಾರ್ಯಕ್ರಮಗಳು ಸಹಕಾರಿ. ಮಹಿಳೆಯರಿಗೆ ಎಲ್ಲಾ ರೀತಿಯ ನೆರವು ಈ ಕೇಂದ್ರದಿAದ ಸಿಗುವಂತಾಗಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಿತ ವಹಿಸಿದ್ದರು. ವೀರಾಜಪೇಟೆ ತಾಲೂಕಿನ ಯೋಜನಾಧಿಕಾರಿ ಪದ್ಮಯ್ಯ, ಮೂರ್ನಾಡು ವಲಯ ಮೇಲ್ವಿಚಾರಕ ಅನೂಪ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೇಯಾ, ವಾಟೆಕಾಡು ಸೇವಾಪ್ರತಿನಿಧಿ ಕಾವೇರಿ, ಮೂರ್ನಾಡು ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.