ಸೋಮವಾರಪೇಟೆ, ಡಿ. ೭: ಶನಿವಾರಸಂತೆ-ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತುಂಡರಿಸಿದ ಜಾಗದಲ್ಲಿ ಗುಂಡಿ ಮುಚ್ಚದಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.
ಲೋಕೋಪಯೋಗಿ ಇಲಾಖೆಯಿಂದ ಕಿಬ್ಬೆಟ್ಟ ಹಾಗೂ ಕೂಗೇಕೋಡಿ ಗ್ರಾಮ ವ್ಯಾಪ್ತಿಯಲ್ಲಿ ಮೋರಿ ನಿರ್ಮಿಸಲು ರಸ್ತೆಯನ್ನು ಅಗೆಯಲಾಗಿದೆ. ಆದರೆ ಕಾಮಗಾರಿ ಪೂರ್ಣಗೊಂಡು ಒಂದೂವರೆ ತಿಂಗಳು ಕಳೆದರೂ ರಸ್ತೆಯ ಗುಂಡಿಗಳನ್ನು ಮುಚ್ಚದಿರುವ ಹಿನ್ನೆಲೆಯಲ್ಲಿ ವಾಹನ ಚಾಲಕರು ಪರದಾಡುವಂತಾಗಿದೆ.
ಮಳೆ ನೀರು ಗುಂಡಿಯಲ್ಲಿ ಸಂಗ್ರಹವಾಗುವುದರಿAದ ಮೋಟಾರ್ ಬೈಕ್ ಸವಾರರು ಮತ್ತು ವಾಹನ ಚಾಲಕರಿಗೆ ಸಮಸ್ಯೆಯಾಗಿದೆ. ರಾಜ್ಯ ಹೆದ್ದಾರಿಯಾಗಿರುವುದರಿಂದ ದಿನಂಪ್ರತಿ ನೂರಾರು ವಾಹನಗಳು ಸಂಚರಿಸುತ್ತವೆ. ಅಪಘಾತ ಸಂಭವಿಸುವ ಮುನ್ನ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗುಂಡಿ ಸರಿಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.