ನಾಪೋಕ್ಲು, ಡಿ. ೬: ನಗರದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ತ್ವರಿತ ಹಾಗೂ ಸಮರ್ಪಕವಾಗಿ ಸರಿಪಡಿಸು ವಂತೆ ಒತ್ತಾಯಿಸಿ ನಾಪೋಕ್ಲುವಿನಲ್ಲಿ ಬಾಳೆಗಿಡ ನೆಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದರು. ದುರಸ್ತಿ ಕಾರ್ಯಕ್ಕೆ ಕ್ರಮಕೈಗೊಳ್ಳದಿದ್ದಲ್ಲಿ ಮುಂದಿನ ಸೋಮವಾರ ನಾಪೋಕ್ಲು ಬಂದ್ ಮಾಡಲಾಗುವುದು ಎಂದು ಪ್ರತಿಭಟನಾನಿರತರು ಎಚ್ಚರಿಸಿದರು.
ಸ್ಥಳೀಯ ನಿವಾಸಿ ಬಿದ್ದಾಟಂಡ ಜಿನ್ನು ನಾಣಯ್ಯ ಮಾತನಾಡಿ, ನಗರದಲ್ಲಿನ ಬಹುತೇಕ ರಸ್ತೆಗಳು ಗುಂಡಿಮಯವಾಗಿವೆ. ನಾಪೋಕ್ಲು-ಭಾಗಮಂಡಲ ರಸ್ತೆ ಸಂಚರಿಸಲಾಗದ ಸ್ಥಿತಿಯಲ್ಲಿದೆ. ಇದನ್ನು ಶೀಘ್ರ ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಅಧ್ಯಕ್ಷ ಬಿದ್ದಾಟಂಡ ರೋಜಿ ಚಿಣ್ಣಪ್ಪ ಮಾತನಾಡಿ, ರಾಜ್ಯ ಸ್ಥಳೀಯ ನಿವಾಸಿ ಬಿದ್ದಾಟಂಡ ಜಿನ್ನು ನಾಣಯ್ಯ ಮಾತನಾಡಿ, ನಗರದಲ್ಲಿನ ಬಹುತೇಕ ರಸ್ತೆಗಳು ಗುಂಡಿಮಯವಾಗಿವೆ. ನಾಪೋಕ್ಲು-ಭಾಗಮಂಡಲ ರಸ್ತೆ ಸಂಚರಿಸಲಾಗದ ಸ್ಥಿತಿಯಲ್ಲಿದೆ. ಇದನ್ನು ಶೀಘ್ರ ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಅಧ್ಯಕ್ಷ ಬಿದ್ದಾಟಂಡ ರೋಜಿ ಚಿಣ್ಣಪ್ಪ ಮಾತನಾಡಿ, ರಾಜ್ಯ ನಡೆದಾಡಲು ತೊಂದರೆಯಾಗಿದೆ. ಕೂಡಲೇ ಹದಗೆಟ್ಟ ರಸ್ತೆಯನ್ನು ದುರಸ್ತಿ ಪಡಿಸದಿದ್ದಲ್ಲಿ ಸೋಮವಾರದ ಬಂದ್‌ಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಮಾತನಾಡಿ, ಗುಂಡಿಮಯ ರಸ್ತೆಯಿಂದ ಸಂಚಾರಕ್ಕೆ ತೀವ್ರ ಸಮಸ್ಯೆ ಯಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಮಾತನಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಾಹನ ಚಾಲಕ ಮಾಲೀಕರ ಸಂಘದ ಪದಾಧಿಕಾರಿಗಳು ಸಾರ್ವಜನಿಕರು ಇದ್ದರು. - ದುಗ್ಗಳ