ಹೆಬ್ಬಾಲೆ: ಸಮೀಪದ ಚಿಕ್ಕ ಅಳುವಾರದಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೫ನೇ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ. ಕೆ.ಎಸ್. ಚಂದ್ರಶೇಖರಯ್ಯ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಅಂಬೇಡ್ಕರ್ ಅವರ ಜೀವನ ಸಾಧನೆ ಮತ್ತು ಅವರ ತತ್ವ ಸಿದ್ದಾಂತ ಹಾಗೂ ಜ್ಞಾನವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಅನುಸರಿಸಬೇಕು.
ಅಂಬೇಡ್ಕರ್ ಅವರಂತೆ ಹೆಚ್ಚು ವಿದ್ಯಾಭ್ಯಾಸ ಮಾಡಿ ಸಮಾಜಕ್ಕೆ ಒಳಿತನ್ನು ಮಾಡಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಕೆ.ಕೆ. ಧರ್ಮಪ್ಪ, ಪರಿಶಿಷ್ಟ ಜಾತಿ, ಪಂಗಡ ಘಟಕದ ಅಧಿಕಾರಿ ರಾಜಕುಮಾರ ಮೇಟಿ, ಯೋಗ ವಿಜ್ಞಾನ ಸಂಯೋಜಕ ಡಾ. ಶ್ಯಾಮಸುಂದರ್ ಮತ್ತು ಸೂಕ್ಷ್ಮಣು ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಐ.ಕೆ. ಮಂಜುಳಾ, ಡಾ. ಗುಣಾಶ್ರೀ ಮತ್ತು ಆಡಳಿತ ಸಿಬ್ಬಂದಿಗಳು, ಭೋದಕ ವೃಂದ, ಭೋದಕೇತರ ವೃಂದ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಸಂಶೋಧನಾ ವಿದ್ಯಾರ್ಥಿಗಳು ಹಾಜರಿದ್ದರು.