ಮಡಿಕೇರಿ, ಡಿ. ೭: ಜಿಲ್ಲೆಯಲ್ಲಿ ೨೦೨೧-೨೨ನೇ ಸಾಲಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸಾಮಾನ್ಯ ಭತ್ತಕ್ಕೆ ಪ್ರತೀ ಕ್ವಿಂಟಾಲ್ಗೆ ೧೯೪೦ ರೂಪಾಯಿ ಹಾಗೂ ‘ಎ’ ಗ್ರೇಡ್ ಭತ್ತಕ್ಕೆ ಪ್ರತೀ ಕ್ವಿಂಟಾಲ್ಗೆ ೧೯೬೦ ರೂ. ಸರ್ಕಾರವು ನಿಗದಿಪಡಿಸಿದೆ.
ಜಿಲ್ಲೆಯಲ್ಲಿ ಒಟ್ಟು ನಾಲ್ಕು ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕುಶಾಲನಗರದ ಕೆಎಸ್ಸಿಎಂಎಫ್ ಆವರಣ ಶನಿವಾರಸಂತೆಯ ಶ್ರೀ ಗಜಾನನ ಮಾಡರ್ನ್ ಅಕ್ಕಿ ಗಿರಣಿ, ಮಡಿಕೇರಿಯ ಎಪಿಎಂಸಿ ಆವರಣ, ಗೋಣಿಕೊಪ್ಪದ ಎಪಿಎಂಸಿ ಆವರಣ. ಸ್ಥಳಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ.
ರೈತರು ತಮ್ಮ ಪ್ರೂಟ್ಸ್ ಗುರುತಿನ ಸಂಖ್ಯೆಯಲ್ಲಿ ಬೆಳೆ ಸಮೀಕ್ಷೆ ಮಾಹಿತಿ ನಮೂದಾಗಿರುವ ಬಗ್ಗೆ ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ಖಚಿತಪಡಿಸಿಕೊಳ್ಳಬೇಕು. ನಂತರ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಲು ಹಾಗೂ ಜಿಲ್ಲೆಯ ರೈತರು ಸರ್ಕಾರದ ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.