ಮಡಿಕೇರಿ, ಡಿ.೮: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ತಾ. ೯ ರಂದು (ಇಂದು) ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಪೂಜೆ ಏರ್ಪಡಿಸಲಾಗಿದೆ. ಬೆಳಿಗ್ಗೆ ೯ಗಂಟೆಗೆ ಮುತ್ತಪ್ಪ ದೇವರ ವೆಳ್ಳಾಟಂನೊAದಿಗೆ ಆರಂಭ ಗೊಳ್ಳಲಿದ್ದು, ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಪುಷ್ಪಾರ್ಚನೆ, ಮಂಗಳಾರತಿ ಸೇವೆಗಳು ನಡೆಯಲಿವೆ. ಮಧ್ಯಾಹ್ನ ೧೨ ಗಂಟೆಗೆ ಸುಬ್ರಹ್ಮಣ್ಯ ದೇವರ ಶ್ರೀಭೂತ ಬಲಿ, ೧೨.೩೦ ಗಂಟೆಗೆ ಮಹಾ ಮಂಗಳಾರತಿ, ನಂತರ ಅನ್ನ ಸಂತರ್ಪಣೆ ನೆರವೇರಲಿದೆ. ಸಂಜೆ ೭ಗಂಟೆಗೆ ಭಜನೆ, ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿಯವರು ತಿಳಿಸಿದ್ದಾರೆ.