ಮಡಿಕೇರಿ, ಡಿ.೮: ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ೨೦೨೦-೨೧ ನೇ ಸಾಲಿನ ಹಾಗೂ ೫೪ ನೇ ವಾರ್ಷಿಕ ಮಹಾಸಭೆಯು ತಾ. ೧೩ ರಂದು ಬೆಳಗ್ಗೆ ೧೧.೩೦ ಗಂಟೆಗೆ ನಗರದ ಪೆನ್ಶನ್ ಲೇನ್ನಲ್ಲಿರುವ ಜಿಲ್ಲಾ ಸಹಕಾರ ಯೂನಿಯನ್ನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಸಿಇಒ ಯೋಗೇಂದ್ರ ನಾಯಕ್ ತಿಳಿಸಿದ್ದಾರೆ.