ಮಡಿಕೇರಿ, ಡಿ. ೮: ಕೊಡಗು ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ಗಳ ಆವರಣದಲ್ಲಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಇಲಾಖಾ ವತಿಯಿಂದ ಕೈಗೊಳ್ಳಲಾಗುತ್ತಿದೆ. ಸಮೀಕ್ಷೆ ನಡೆಸಿ ೮೯ ಶಾಲಾ ಆವರಣದಲ್ಲಿ ಹಾದುಹೋಗಿರುವ ವಿದ್ಯುತ್ ಮಾರ್ಗಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ಇಲಾಖಾ ವತಿಯಿಂದ ೬೫ ಶಾಲೆ ಆವರಣದಲ್ಲಿ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸಲಾಗಿದೆ. ಉಳಿದ ಕಾಮಗಾರಿಯನ್ನು ತಾ. ೧೦ ರೊಳಗೆ ಪೂರ್ಣಗೊಳಿಸಲು ಯೋಜನೆ ತಯಾರಿಸಲಾಗಿದೆ. ೮ ಖಾಸಗಿ ಶಾಲೆಗಳನ್ನು ಗುರುತಿಸಲಾಗಿದ್ದು, ಈ ಶಾಲೆಗಳ ಆವರಣದಲ್ಲಿ ಹಾದುಹೋಗಿರುವ ವಿದ್ಯುತ್ ಮಾರ್ಗಗಳನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದಲೇ ನಿರ್ವಹಿಸುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಬAಧಿಸಿದ ಇಲಾಖೆಯವರು ಹತ್ತಿರದ ಸೆಸ್ಕ್, ಉಪ ವಿಭಾಗ ಅಧಿಕಾರಿಯವರನ್ನು ಸಂಪರ್ಕಿಸುವAತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.