ಮಡಿಕೇರಿ, ಡಿ. ೮: ಚೆಟ್ಟಳ್ಳಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರ ಮೇಲೆ ಕಾಂಗ್ರೆಸ್ ಪಕ್ಷದ ಚೆಟ್ಟಳ್ಳಿ ವಲಯ ಅಧ್ಯಕ್ಷ ಪುತ್ತರೀರ ಪಪ್ಪು ತಿಮ್ಮಯ್ಯ ಗುಂಡಿನ ದಾಳಿ ನಡೆಸಿರುವದನ್ನು ಖಂಡಿಸುವದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಹೇಳಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈ ರೀತಿಯ ದಾಳಿಗಳನ್ನು ಪೊಲೀಸರು ತಡೆಯಬೇಕು, ಇಲ್ಲವಾದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.