ಮಡಿಕೇರಿ, ಡಿ. ೮: ಜಿಲ್ಲೆಯ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೨-೨೩ನೇ ಸಾಲಿಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ತಾ. ೧೫ ರವರೆಗೆ ವಿಸ್ತರಿಸಲಾಗಿದೆ. ಜೊತೆಗೆ ಪೋಷಕರು ಸಲ್ಲಿಸಿದ ಅರ್ಜಿಯಲ್ಲಿ ಅವಶ್ಯಕ ತಿದ್ದುಪಡಿ ಮಾಡಬೇಕಾದಲ್ಲಿ ತಾ. ೧೬ ಮತ್ತು ೧೭ ರಂದು ಅವಕಾಶ ನೀಡಲಾಗಿದೆ.

ಪೋಷಕರು ವೆಬ್‌ಸೈಟ್‌ನಲ್ಲಿ ಸಲ್ಲಿಸಿದ ಅರ್ಜಿಯ ನೋಂದಣಿ ಸಂಖ್ಯೆಯನ್ನು ಉಪಯೋಗಿಸಿ ತಿದ್ದುಪಡಿ ಮಾಡಲು ಅವಕಾಶವಿದ್ದು, ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳ ಅರ್ಜಿ ಪತ್ರವನ್ನು ಮುಖ್ಯೋಪಾಧ್ಯಾಯರ ಸಹಿಯೊಂದಿಗೆ ದೃಢೀಕರಿಸಿ ನಕಲು ಪ್ರತಿಯನ್ನು ಪೋಷಕರು ಗಾಳಿಬೀಡು ನವೋದಯ ವಿದ್ಯಾಲಯ ಕಚೇರಿಗೆ ಸಲ್ಲಿಸಲು ಪ್ರಕಟಣೆ ತಿಳಿಸಿದೆ.