ಮಡಿಕೇರಿ, ಡಿ. ೭: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿಗೆ ೧೦ ಕಂಪ್ಯೂಟರ್ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕಾಲೇಜಿನಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಕಂಪ್ಯೂಟರ್ಗಳನ್ನು ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಪಿ.ಆರ್. ರಾಜೇಶ್ ವಿತರಿಸಿ ಮಾತನಾಡಿ, ರೋಟರಿ ಮಿಸ್ಟಿ ಹಿಲ್ಸ್, ಕಾಗ್ನಸೆಂಟ್ ಸಂಸ್ಥೆಯ ಸಹಯೋಗದೊಂದಿಗೆ ಸರ್ಕಾರಿ ಕಾಲೇಜುಗಳಿಗೆ ಕಂಪ್ಯೂಟರ್ಗಳನ್ನು ವಿತರಿಸುತ್ತಿದ್ದು ಈ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣ ಸುಧಾರಣೆಗೆ ಆದ್ಯತೆ ನೀಡಿದೆ ಎಂದರು.
ರೋಟರಿ ಉಪರಾಜ್ಯಪಾಲ ಅನಿಲ್ ಎಚ್.ಟಿ. ಮಾತನಾಡಿ, ಕಳೆದ ವರ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ರೋಟರಿಯಿಂದ ಟ್ಯಾಬ್ಗಳನ್ನು ವಿತರಿಸಲಾಯಿತು. ಅಂತೆಯೇ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕಂಪ್ಯೂಟರ್ಗಳನ್ನು ನೀಡಲಾಗುತ್ತಿದೆ. ೧೨ ಲಕ್ಷ ಕಂಪ್ಯೂಟರ್ಗಳನ್ನು ರಾಜ್ಯವ್ಯಾಪಿ ಕಾಲೇಜುಗಳಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ರೋಟರಿ ಮಿಸ್ಟಿ ಹಿಲ್ಸ್ನ ನಿರ್ದೇಶಕ ಕುಲ್ಲೇಟಿರ ಅಜಿತ್ ನಾಣಯ್ಯ, ಪದವಿ ಕಾಲೇಜು ಪ್ರಾಂಶುಪಾಲೆ ಡಾ. ಎನ್. ಕಾವೇರಿ, ಬೆಂಗಳೂರಿನ ಉದ್ಯಮಿ ಬೊಮ್ಮಂಡ ಬೋಪಣ್ಣ ಜಯಂತ್, ಶಿಕ್ಷಕ ವರ್ಗ ಕಾರ್ಯಕ್ರಮದಲ್ಲಿ ಹಾಜರಿದ್ದರು.