ಮಡಿಕೇರಿ, ಡಿ.೮: ಸರ್ಕಾರದ ಮಾರ್ಗ ಸೂಚಿಯನ್ನು ಪಾಲಿಸಬೇಕಿರುವುದರಿಂದ ತಾ. ೯ ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಷಷ್ಠಿ ಕಾರ್ಯಕ್ರಮವು ಸರಳವಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆ ಬದಲಾಗಿ ಪ್ರಸಾದ ವಿನಿಯೋಗವನ್ನು ಮಧ್ಯಾಹ್ನ ೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಭಕ್ತಾಧಿಗಳು ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿ ಷಷ್ಠಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.