ಕೂಡಿಗೆ, ಡಿ. ೮: ತೊರೆನೂರು ಗ್ರಾಮದಲ್ಲಿ ಒಕ್ಕಲಿಗರ ಸಂಘದ ಸಭೆ ಸಂಘದ ಅಧ್ಯಕ್ಷ ಟಿ.ಪಿ. ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕುಶಾಲನಗರದ ತಾಲೂಕು ಒಕ್ಕಲಿಗರ ಸಂಘ ಮತ್ತು ನಾಡಪ್ರಭು ಸಹಕಾರ ಸಂಘದ ಅಧ್ಯಕ್ಷ ಎಂ.ಕೆ. ದಿನೇಶ್ ನೆರವೇರಿಸಿ ಮಾತನಾಡಿ, ಸಂಘದ ಬೆಳವಣಿಗೆಗೆ ಅನುಕೂಲವಾಗುವಂತೆ ನೂತನ ಕಟ್ಟಡ ನಿರ್ಮಾಣಕ್ಕೆ ಬೇಕಾಗುವ ಸಹಕಾರವನ್ನು ನೀಡಲಾಗುವುದು. ಅಲ್ಲದೆ ಸಮುದಾಯದ ವತಿಯಿಂದ ಆರೋಗ್ಯ, ಉದ್ಯೋಗ, ಸಂಘದ ಪ್ರಗತಿಗೆ ಪೂರಕವಾದ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭ ರಾಜ್ಯ ಒಕ್ಕಲಿಗರ ಸಂಘದ ಅಭ್ಯರ್ಥಿ ಹೆಚ್.ಎಸ್. ಚೇತನ್, ಲೋಕೇಶ್, ತೊರೆನೂರು ಸಹಕಾರ ಸಂಘದ ಮಾಜಿ ಅಧ್ಯಕ್ಷ ಟಿ.ಎಸ್. ಕೃಷ್ಣೆಗೌಡ, ಶಿರಂಗಾಲ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ,