ಸೋಮವಾರಪೇಟೆ,ಡಿ.೮: ಶಿಕ್ಷಕ ಹಾಗೂ ಸಾಹಿತಿ ಕಾಜೂರು ಸತೀಶ್ ಅವರು ಬರೆದ ಕಣ್ಣಲ್ಲಿಳಿದ ಮಳೆ ಹನಿ ಎಂಬ ಕೃತಿಯು ಚಿ. ಶ್ರೀನಿವಾಸರಾಜು ಕಾವ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಧಾರವಾಡದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸಂಗಾತ ಪುಸ್ತಕ ಪ್ರಕಾಶನದ ವತಿಯಿಂದ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕವಿ ಎಚ್.ಎನ್. ಶಿವಪ್ರಕಾಶ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.