ಮಡಿಕೇರಿ, ಡಿ. ೮: ತಾ. ೧೦ ರಂದು ವಿಧಾನ ಪರಿಷತ್ ಚುನಾವಣೆ ನಡೆಯುವ ಹಿನ್ನೆಲೆ ತಾ. ೭ ರಿಂದ ಪ್ರಾರಂಭಗೊAಡಿದ್ದು, ನಿಷೇಧಾಜ್ಞೆ ತಾ. ೧೧ರ ಸಂಜೆ ೪ ಗಂಟೆವರೆಗೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಿಷೇಧಾಜ್ಞೆ ಇರುವಾಗ ಚುನಾವಣೆಗೆ ಸಂಬAಧಿಸಿದAತೆ ಯಾವುದೇ ಸಭೆ-ಸಮಾರಂಭ ನಡೆಸುವುದು, ನಿಯಮಬಾಹಿರ ಒಗ್ಗೂಡುವಿಕೆಯನ್ನು ಮತ್ತು ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಿದೆ.

ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು, ಸಂಚರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಎಲ್ಲಾ ಮತಗಟ್ಟೆಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ ಹಾಗೂ ಮತಗಟ್ಟೆಯ ೧೦೦ ಮೀಟರ್ ವ್ಯಾಪ್ತಿಯಲ್ಲಿ ಅಭ್ಯರ್ಥಿ ಪರ ಪ್ರಚಾರ, ಮತದಾರರ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ. ಸರಕಾರ, ಚುನಾವಣಾ ಆಯೋಗದ ಕೋವಿಡ್-೧೯ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.