ಹೆಲಿಕಾಪ್ಟರ್ ಅಪಘಾತ - ತನಿಖೆಗೆ ಆದೇಶ

ನವದೆಹಲಿ, ಡಿ. ೯: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಮಿ-೧೭ ವಿ-೫ (ಒi-೧೭ ಗಿ-೫) ಭೀಕರ ದುರಂತಕ್ಕೆ ಸಂಬAಧಿಸಿದAತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಕಲಾಪದ ಆರಂಭದಲ್ಲಿ ಹೇಳಿಕೆ ನೀಡಿದ್ದಾರೆ. ಭಾರತೀಯ ವಾಯುಪಡೆ (ಐಎಎಫ್) ಸೇನಾ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತ್ರಿ-ಸೇವಾ ತನಿಖೆಗೆ ಆದೇಶಿಸಲಾಗಿದೆ. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತನಿಖಾ ತಂಡ ನಿನ್ನೆಯೇ ವೆಲ್ಲಿಂಗ್ಟನ್ ತಲುಪಿ ತನಿಖೆ ಆರಂಭಿಸಿದೆ ಎಂದು ಸದನಕ್ಕೆ ತಿಳಿಸಿದ್ದಾರೆ. ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೊರತುಪಡಿಸಿ ಬೇರೆಲ್ಲರೂ ನಿಧನರಾಗಿದ್ದಾರೆ. ವರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಅವರ ಜೀವ ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು. ಇದಕ್ಕೂ ಮೊದಲು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಗಲಿದ ಸೇನಾಧಿಕಾರಿಗಳಿಗೆ ಸದಸ್ಯರು ಎರಡು ನಿಮಿಷ ಮೌನಾಚರಣೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.

ನೈಟ್ ಕರ್ಫ್ಯೂ - ಶಾಲೆ ಬಂದ್ ಸದ್ಯಕ್ಕಿಲ್ಲ

ಬೆಂಗಳೂರು, ಡಿ. ೯: ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕುರಿತು ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ವಾರದ ಬಳಿಕ ಈ ಕುರಿತು ಪರಿಸ್ಥಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ. ಕ್ರಿಸ್ಮಸ್, ಹೊಸ ವರ್ಷಕ್ಕೆ ಒಂದು ವಾರ ನೋಡಿಕೊಂಡು ಕೆಲ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ವಿವರಿಸಿದರು. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಕುರಿತು ವಿವರಣೆ ನೀಡಿದ್ದಾರೆ. ಜನರು ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ಹಾಸ್ಟೆಲ್‌ಗಳಿಗೆ ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದೇವೆ. ವಾರ್ಡನ್, ಅಡುಗೆಯವರಿಗೆ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿರಬೇಕು. ವ್ಯಾಕ್ಸಿನ್ ಡ್ರೆöÊವ್ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ ಎಂದರು. ಸಂಪುಟ ಸಭೆಯ ನಂತರ ಶಾಲೆಗಳ ಪರಿಸ್ಥಿತಿ ಬಗ್ಗೆ ಬೆಂಗಳೂರಿನಲ್ಲಿAದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚುವುದಿಲ್ಲ, ಪರೀಕ್ಷೆಗಳು ಎಂದಿನAತೆ ನಡೆಯುತ್ತಿದೆ. ಶಾಲೆಗಳಲ್ಲಿ ಹಿಂದಿನ ಮಾರ್ಗಸೂಚಿಯೇ ಮುಂದುವರಿಯಲಿದೆ. ಹೊಸದಾಗಿ ಜಾರಿಗೆ ತರುವುದಿಲ್ಲ. ವಸತಿ ಶಾಲೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ವಿಶೇಷ ಗಮನ ನೀಡುತ್ತೇವೆ ಎಂದರು.

ಕೃಷಿ ಕಾಯ್ದೆ ರದ್ದು:ಪ್ರತಿಭಟನೆ ಹಿಂಪಡೆದ ರೈತರು

ನವದೆಹಲಿ, ಡಿ. ೯: ತಮ್ಮ ಬೇಡಿಕೆಯಂತೆ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಗುರುವಾರ ಹಸ್ತಾಂತರಿಸಿದ ನಂತರ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗುತ್ತಿದೆ ಎಂದು ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಘೋಷಿಸಿದೆ. ತಾ. ೧೧ ರಂದು, ಶನಿವಾರ ದೆಹಲಿ ಗಡಿಯನ್ನು ಖಾಲಿ ಮಾಡುವುದಾಗಿ ಮತ್ತು ಜನವರಿ ೧೫ ರಂದು ಮತ್ತೊಂದು ಸಭೆ ನಡೆಸುವುದಾಗಿ ರೈತರು ಹೇಳಿದ್ದಾರೆ. ಕೇಂದ್ರದ ಪರಿಷ್ಕೃತ ಪ್ರಸ್ತಾವನೆ ಬಂದ ಕೂಡಲೇ, ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ನಡೆಸುವುದಾಗಿ ತಿಳಿಸಿದೆ. ಕೃಷಿ ಕಾಯ್ದೆಗಳನ್ನು ಹಿಂಪಡೆದ ನಂತರ ಕೇಂದ್ರ ಸರ್ಕಾರವೂ ತಮ್ಮ ಮುಂದೆ ಹೊಸ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಅದನ್ನು ರೈತರು ಒಪ್ಪಿಕೊಂಡಿದ್ದಾರೆ. ಅವರ ಬೇಡಿಕೆಯನ್ನು ಆಧರಿಸಿ ಕೇಂದ್ರವು ಲಿಖಿತ ಭರವಸೆ ನೀಡಿದೆ.