ಮಡಿಕೇರಿ, ಡಿ. ೧೦: ಆಜಾದಿ ಕಾ ಅಮೃತ್ ಮಹೋತ್ಸವದ ಕಾರ್ಯಕ್ರಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಸಾಂಸ್ಕೃತಿಕ ಸಮಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಮೇಜರ್ ವೆಂಕಟಗಿರಿ ಅವರು ಆತ್ಮನಿರ್ಭರ್ ಭಾರತಯೆಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸ್ವಾವಲಂಬಿ ಭಾರತವಾಗಲು ವಿದ್ಯಾರ್ಥಿಗಳಲ್ಲಿ ಸತತ ಪ್ರಯತ್ನ, ಶ್ರಮ ಹಾಗೂ ಪ್ರಾಮಾಣಿಕತೆಯ ಅವಶ್ಯಕತೆಯಿದೆ ಎಂದು ಹೇಳಿದರು.

ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ವೇಣುಗೋಪಾಲ್ ಹೆಚ್.ಎಸ್., ಸಹಾಯಕ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ವಾಣಿಜ್ಯ ವಿಭಾಗ ಮತ್ತು ಶೃತಿ ಪಾರ್ವತಿ ಬಿ.ಎಸ್., ಸಾಂಸ್ಕೃತಿಕ ಸಮಿತಿ ಸಂಚಾಲಕರು ಹಾಗೂ ಸಹಾಯಕ ಪ್ರಾಧ್ಯಾಪಕರು, ಇತಿಹಾಸ ವಿಭಾಗ ಉಪಸ್ಥಿತರಿದ್ದರು.