ಪೊನ್ನಂಪೇಟೆ, ಡಿ. ೧೦: ಪೊನ್ನಂಪೇಟೆಯ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ವಿಭಾಗದಿಂದ ೫ ಮತ್ತು ೭ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನವೆಂಬರ್ ೩೦ರಿಂದ ತಾ. ೩ರವರೆಗೆ ‘‘ಎಂಬೆಡೆಡ್ ಸಿಸ್ಟಮ್ ಡಿಸೈನ್’’ ಕುರಿತು ನಾಲ್ಕು ದಿನಗಳ ಹ್ಯಾಂಡ್-ಆನ್ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರದಲ್ಲಿ ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಸೈನ್ಸ್ನ ಪ್ರಮುಖರು ಪಾಲ್ಗೊಂಡಿದ್ದರು.

ಕೊಡವ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾದ ಡಾ.ಎಂ.ಸಿ. ಕಾರ್ಯಪ್ಪ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ಎಂ. ಬಸವರಾಜ್ ಉಪಸ್ಥಿತರಿದ್ದರು. ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಡಾ. ದಿವಾಕರ ಎಸ್.ಎಸ್. ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು. ಸಂಪನ್ಮೂಲ ವ್ಯಕ್ತಿಗಳು ಪ್ರಾಯೋಗಿಕ ಅಧಿವೇಶನವನ್ನು ನಡೆಸಿದರು. ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಲಭ್ಯವಿರುವ ವಿವಿಧ ಎಲೆಕ್ಟಾçನಿಕ್ಸ್ ಕಲಿಕಾ ವೇದಿಕೆಗಳನ್ನು ಪರಿಚಯಿಸಿದರು.