ಮಡಿಕೇರಿ ಡಿ.೧೦ : ಆರ್ಯ ಈಡಿಗ ಮಹಾ ಸಂಸ್ಥಾನದ ವತಿಯಿಂದ ತಾ.೧೩ ರಂದು ಆರ್ಯ ಈಡಿಗ ಸಮಾಜ ಬಾಂಧವರ ಸಮಾಲೋಚನಾ ಸಭೆ ಮಡಿಕೇರಿಯಲ್ಲಿ ನಡೆಯಲಿದೆ.
ಅಂದು ಅಪರಾಹ್ನ ೨.೩೦ ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಶ್ರೀ ರೇಣುಕಾಪೀಠ ಮತ್ತು ಶ್ರೀ ನಾರಾಯಣ ಗುರು ಮಠದ ನಿಯೋಜಿತ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಜೆ.ಪಿ.ಪ್ರತಿಷ್ಠಾನದ ಅಧ್ಯಕ್ಷ ಜೆ.ಪಿ.ಸುಧಾಕರ್, ಕೊಡಗು ಜಿಲ್ಲಾ ಎಸ್.ಎನ್.ಡಿ.ಪಿ ಸಂಘದ ಅಧ್ಯಕ್ಷ ವಿ.ಕೆ.ಲೋಕೇಶ್, ಬಿಲ್ಲವ ಸಮಾಜದ ಅಧ್ಯಕ್ಷ ಬಿ.ವೈ. ಆನಂದ, ಹಿಂದೂ ಮಲೆಯಾಳಿ ಸಮಾಜದ ಕೊಡಗು ಜಿಲ್ಲೆ ಮತ್ತು ಸೋಮವಾರಪೇಟೆ ತಾಲೂಕು ಅಧ್ಯಕ್ಷ ವಿ.ಎಂ.ವಿಜಯನ್, ಆರ್ಯ ಈಡಿಗ ಸಮಾಜದ ಕೂಡಿಗೆ ಮುಖಂಡ ಎಸ್.ಕೆ.ಶ್ರೀನಿವಾಸ ಪಾಲ್ಗೊಳ್ಳಲಿದ್ದಾರೆ.
ಸಭೆಯಲ್ಲಿ ಎಸ್ಎನ್ಡಿಪಿ ಸಂಘದ ಮಾಜಿ ಅಧ್ಯಕ್ಷ ಕೆ.ಎನ್.ವಾಸು ಅವರನ್ನು ಸನ್ಮಾನಿಸಲಾಗುವುದು ಎಂದು ಸಂಚಾಲಕ ಟಿ.ಕೆ.ಸಾಯಿಕುಮಾರ್ ತಿಳಿಸಿದ್ದಾರೆ.