ಮಡಿಕೇರಿ, ಡಿ.೧೦ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ದಿನಾಚರಣೆ ಮತ್ತು ವಾಲಿ ಮೋಕ್ಷ ಅರೆಭಾಷೆ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮವು ಡಿಸೆಂಬರ್, ೧೫ ರಂದು ಬೆಳಗ್ಗೆ ೧೦ ಗಂಟೆಗೆ ಸುಳ್ಯದ ಅಂಬಟೆಡ್ಕ ಕನ್ನಡ ಭವನದಲ್ಲಿ ನಡೆಯಲಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷಿö್ಮÃನಾರಾಯಣ ಕಜೆಗದ್ದೆ, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಕೋಲ್ಚಾರ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಕರುಣಾಕರ ನಿಡಿಂಜಿ, ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಹರಪ್ರಸಾದ್ ತುದಿಯಡ್ಕ, ಇತರರು ಪಾಲ್ಗೊಳ್ಳಲಿದ್ದಾರೆ.