ಮಡಿಕೇರಿ, ಡಿ. ೧೦ : ಜಿಲ್ಲೆಯಲ್ಲಿ ಶುಕ್ರವಾರ ೧೮ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೯, ವೀರಾಜಪೇಟೆ ತಾಲೂಕಿನಲ್ಲಿ ೬, ಸೋಮವಾರಪೇಟೆ ತಾಲೂಕಿನಲ್ಲಿ ೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫,೫೮೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪ ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೪,೯೯೭ ಮಂದಿ ಗುಣಮುಖ ರಾಗಿದ್ದಾರೆ. ಇದುವರೆಗೆ ಒಟ್ಟು ೪೩೪ ಮರಣ ಪ್ರಕರಣಗಳು ವರದಿಯಾಗಿವೆ. ೧೫೭ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೨೮ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೦.೮೩ ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.