ಕೂಡಿಗೆ, ಡಿ. ೧೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದ ಪ್ರಮುಖ ಬೀದಿಯ ಮನೆಗಳ ಮುಂದೆ ಇದ್ದು ಬೀಳುವ ಹಂತವನ್ನು ತಲುಪಿ ಅಪಾಯದಂಚಿನಲ್ಲಿದ್ದ ಅರಳಿ ಮರವನ್ನು ಅರಣ್ಯ ಇಲಾಖೆಯ ಸಹಕಾರದೊಂದಿಗೆ ತೆರವು ಗೊಳಿಸಲಾಯಿತು.
ಮರ ತೆರವಿನ ವಿಚಾರ ಗ್ರಾಮ ಸಭೆಯಲ್ಲಿ ಚರ್ಚೆಯಾಗಿತ್ತು. ಗ್ರಾಮಸ್ಥರ ಒತ್ತಾಯದ ಮೇರೆಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು. ಮನವಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮರವನ್ನು ತೆರೆವುಗೊಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ್, ಕೂಡುಮಂಗಳೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ, ಪ್ರಮೀಣ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವಿದ್ಯುತ್ ಇಲಾಖೆಯ ಇಂಜಿನಿಯರ್ ಹಾಜರಿದ್ದರು.