ಸಿಡಿಎಸ್ ಬಿಪಿನ್ ರಾವತ್ ಪಂಚಭೂತಗಳಲ್ಲಿ ಲೀನ

ನವದೆಹಲಿ, ಡಿ. ೧೦: ತಮಿಳುನಾಡಿನ ಕುನೂರು ಬಳಿ ಬುಧವಾರ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಪಂಚಭೂತಗಳಲ್ಲಿ ಲೀನರಾದರು. ದೆಹಲಿಯ ಬ್ರಾರ್ ಸ್ಕೆ÷್ವÃರ್ ಚಿತಾಗಾರದಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಸೇನಾ ಸಿಬ್ಬಂದಿ ೧೭ ಬಾರಿ ಕುಶಾಲ ತೋಪು ಸಿಡಿಸಿದ ನಂತರ ರಾವತ್ ಅವರ ಪುತ್ರಿಯರಾದ ಕೃತಿಕಾ ಹಾಗೂ ತಾರಿಣಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ತಮ್ಮ ತಂದೆ-ತಾಯಿಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಚಿತಾಗಾರದ ಹೊರಗಡೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನರು ಘೋಷಣೆ ಕೂಗುತ್ತಾ, ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅಂತ್ಯಕ್ರಿಯೆ ವೇಳೆ ಸುಮಾರು ೮೦೦ ಸೇನಾ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

ದೇಶದಲ್ಲಿ ೨೫ ಓಮಿಕ್ರಾನ್ ಪ್ರಕರಣಗಳು

ನವದೆಹಲಿ, ಡಿ. ೧೦: ದೇಶದಲ್ಲಿ ಇಲ್ಲಿಯವರೆಗೂ ಒಟ್ಟಾರೇ ೨೫ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ ವಾಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಲವ್ ಅಗರ್ ವಾಲ್, ಪತ್ತೆಯಾಗಿರುವ ಎಲ್ಲಾ ಪ್ರಕರಣಗಳು ಸೌಮ್ಯ ಲಕ್ಷಣಗಳನ್ನು ಹೊಂದಿವೆ. ಪತ್ತೆಯಾದ ಒಟ್ಟು ರೂಪಾಂತರಿ ಶೇ. ೦.೪ಕ್ಕಿಂತಲೂ ಕಡಿಮೆ ಇರುವುದಾಗಿ ತಿಳಿಸಿದರು. ದೇಶದಲ್ಲಿ ಪತ್ತೆಯಾದ ಒಟ್ಟಾರೇ ಓಮಿಕ್ರಾನ್ ಪ್ರಕರಣಗಳಲ್ಲಿ ರಾಜಸ್ಥಾನದಲ್ಲಿ ೯, ಗುಜರಾತಿನಲ್ಲಿ ಮೂರು, ಮಹಾರಾಷ್ಟçದಿಂದ ೧೦, ಕರ್ನಾಟಕದಿಂದ ೨ ಹಾಗೂ ದೆಹಲಿಯಿಂದ ಒಂದು ಪ್ರಕರಣ ವರದಿಯಾಗಿದೆ ಎಂದರು. ಕಳೆದ ವಾರ ದೇಶದಲ್ಲಿ ಒಟ್ಟಾರೆ ಕೋವಿಡ್ ಪಾಸಿಟಿವಿಟಿ ದರ ಶೇ. ೦.೭೩ ರಷ್ಟಿತ್ತು. ಕಳೆದ ೧೪ ದಿನಗಳಲ್ಲಿ ೧೦,೦೦೦ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ಕೇರಳ ಮತ್ತು ಮಹಾರಾಷ್ಟçದಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಾಗಿರುವುದಾಗಿ ಅವರು ಮಾಹಿತಿ ನೀಡಿದರು. ಲಸಿಕೆ ಹೊರತಾಗಿಯೂ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಮುಂದುವರೆಸುವAತೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಾದದ್ದು ಅಗತ್ಯವಾಗಿದೆ. ಯುರೋಪ್‌ನಲ್ಲಿ ಸಾರ್ವಜನಿಕ ಆರೋಗ್ಯ ಕ್ರಮಗಳ ಅನುಸರಣೆಯಲ್ಲಿ ನಿರ್ಲಕ್ಷö್ಯದಿಂದಾಗಿ ಅಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಲವ್ ಅಗರ್ ವಾಲ್ ಹೇಳಿದರು.

ಉಗ್ರರ ದಾಳಿ - ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ, ಡಿ. ೧೦: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರ ಹಾವಳಿ ಹೆಚ್ಚಾಗಿದ್ದು, ಇಂದು ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶಾನ್ ಚೌಕ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಎಂಬ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾಶ್ಮೀರ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಐಜಿ) ವಿಜಯ್ ಕುಮಾರ್ ಅವರು, 'ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಅಪರಿಚಿತ ಉಗ್ರರು ಪೊಲೀಸ್ ಪಡೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಅಂತೆಯೇ ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.