ಮಡಿಕೇರಿ, ಡಿ. ೧೧ : ಪವಿತ್ರ ಧಾರ್ಮಿಕ ಕ್ಷೇತ್ರವಾಗಿರುವ ಭಾಗಮಂಡಲವನ್ನು ದೇಗುಲಗಳ ಪಟ್ಟಣ (ಟೆಂಪಲ್ ಟೌನ್) ಎಂದು ಘೋಷಿಸಬೇಕೆಂಬ ಬೇಡಿಕೆಗೆ ಸ್ಪಂದಿಸಿರುವ ಜಿಲ್ಲಾಡಳಿತ ಈ ಸಂಬAಧ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದೆ.
ಈ ಬಗ್ಗೆ ತಲಕಾವೇರಿ ಮೂಲಸ್ವರೂಪ ರಕ್ಷಣಾ ವೇದಿಕೆ ಮನವಿ ಸಲ್ಲಿಸಿತ್ತು. ಸಂಘಟನೆಯ ಮನವಿಯ ಹಿನ್ನೆಲೆ ಅಪರ ಜಿಲ್ಲಾಧಿಕಾರಿ ಸರಕಾರದ ಗಮನಕ್ಕೆ ತಂದಿದ್ದಾರೆ.