ವೀರಾಜಪೇಟೆ, ಡಿ. ೧೦: ನಿಯಮ ಉಲ್ಲಂಘಿಸಿದ ಅಂಗಡಿ ಮಾಲೀಕರು ಗಳಿಗೆ ರಾಜ್ಯ ತಂಬಾಕು ನಿಯಂತ್ರಣ ಘಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಂಡ ವಿಧಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧÀ ಎಂದು ಎಚ್ಚರಿಕೆ ಫಲಕಗಳನ್ನು ನಗರದ ಅಂಗಡಿ ಮಳಿಗೆಗಳಲ್ಲಿ ಅಳವಡಿಸದ ಹಿನ್ನೆಲೆ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿಗಳು ನಗರದ ಒಟ್ಟು ೨೧ ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿ ಒಟ್ಟು ೩೫೫೦ ರೂಗಳು ದಂಡ ವಿಧಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿಗಳಲ್ಲಿ ೬೦*೪೫ ಸೆ.ಮೀ ಅಳತೆಯ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಆದರೆ, ಅಂಗಡಿ ಮಾಲೀಕರು ಎಚ್ಚರಿಕೆ ಫಲಕ ಅಳವಡಿಸದಿರುವುದು ಗಮನಕ್ಕೆ ಬಂದ ಹಿನ್ನೆಲೆ ದಂಡ ವಿಧಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂದರ್ಭ ಜಿಲ್ಲಾ ಆರೋಗ್ಯ ನಿಯಂತ್ರಣಾಧಿಕಾರಿಗಳಾದ ಶ್ರೀನಿವಾಸ್, ಮುತ್ತು ಲೋಕೇಶ್, ಪ್ರೇಮ್ ಕುಮಾರ್, ತಾಲೂಕು ನಿರೀಕ್ಷಣಾಧಿಕಾರಿ ಶಶಿಕಾಂತ್, ಜಿಲ್ಲಾ ಸಮಾಜ ಸೇವಕ ಮಂಜುನಾಥ್ ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.