ಮಡಿಕೇರಿ, ಡಿ. ೧೦ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ದಿನಾಚರಣೆ ಮತ್ತು ಎನ್.ಎಸ್.ದೇವಿಪ್ರಸಾದ್ ಅವರ ಸಾಕ್ಷö್ಯಚಿತ್ರ ಪ್ರದರ್ಶನ ಮತ್ತು ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮವು ತಾ. ೧೫ ರಂದು ಸಂಜೆ ೪ ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಮೈಸೂರು ಚಾಮರಾಜ ಜೋಡಿ ರಸ್ತೆಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪಟ್ಟಡ ಶಿವಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.