ಮಡಿಕೇರಿ, ಡಿ. ೧೧: ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆಯ ಸಂಬAಧ ತಾ. ೧೪ ರಂದು ನಡೆಯುವ ಮತ ಎಣಿಕೆಯಂದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಾ. ೧೪ ರಂದು ಬೆಳಿಗ್ಗೆ ೬ ಗಂಟೆಯಿAದ ಅದೇ ದಿನ ಮಧ್ಯರಾತ್ರಿ ೧೨ ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಮತ ಎಣಿಕೆ ಕೇಂದ್ರವಾದ ಮಡಿಕೇರಿಯ ಸೈಂಟ್ ಜೋಸೆಫ್ ಕಾನ್ವೆಂಟ್ ಆವರಣದೊಳಗೆ ಸಂಬAಧಪಡದ, ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಿದೆ. ಮತ ಎಣಿಗೆ ನಡೆಯುವ ಕೇಂದ್ರದ ೫ ಕಿ.ಮೀ. ವ್ಯಾಪ್ತಿಯಲ್ಲಿ ನಿಯಮಬಾಹಿರ ಒಗ್ಗೂಡುವಿಕೆ, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಸರಕಾರದ ಕೋವಿಡ್ - ೧೯ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದ್ದಾರೆ.