ವೀರಾಜಪೇಟೆ, ಡಿ. ೧೨: ಬೆಂಗಳೂರಿನ ಮಲ್ಲೇಶ್ವರಂನ ಕರ್ನಾಟಕ ರಾಜ್ಯ ವಿಶ್ವಕರ್ಮ ಸಭಾಂಗಣದಲ್ಲಿ ಸಾಗರ ಸಂಗಮ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ನಡೆದ ಸಾಂಸ್ಕೃತಿಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ನಾಟ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನೃತ್ಯ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಾ ಸೋಮಣ್ಣ, ಭಾಗ್ಯಶ್ರೀ, ಲಕ್ಷಾ, ನೌಶಿದ, ಡೆಲಿಶಾ ದೇಚಮ್ಮ, ಸಾನ್ವಿ, ಲಾವಣ್ಯ, ಅನುಷಾ, ಪುಣ್ಯ ಇವರಿಗೆ ಪ್ರಶಸ್ತಿ ಲಭಿಸಿದ್ದು ವೀರಾಜಪೇಟೆಯ ವಿದೂಷಿ ಪ್ರೇಮಾಂಜಲಿ ಆಚಾರ್ಯ ಅವರ ಬಳಿ ನೃತ್ಯ ಅಭ್ಯಾಸ ಮಾಡುತ್ತಿದ್ದಾರೆ.