ಮಡಿಕೇರಿ, ಡಿ.೧೧ : ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ, ಮಡಿಕೇರಿ ವಿಸ್ತರಣಾ ಶಿಕ್ಷಣ ಘಟಕ ಹಾಗೂ ಡ್ರಂ ಸೀಡರ್ ಭತ್ತ ಬಿತ್ತನೆ ಯೋಜನೆ ವತಿಯಿಂದ ತಾ.೧೩ ರಂದು (ನಾಳೆ) ಅಭ್ಯತ್ ಮಂಗಲ ಗ್ರಾಮದಲ್ಲಿ ಡ್ರಂ ಸೀಡರ್‌ನಿಂದ ಬಿತ್ತಿದ ಭತ್ತದ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಲಿದೆ.

ಸ್ಥಳೀಯ ಕೃಷಿಕ ಅಂಚೆಮನೆ ಸುಧಿಕುಮಾರ್ ಅವರ ಭತ್ತದ ಗದ್ದೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ಮೃತ್ಯುಂಜಯ ಸಿ.ವಾಲಿ ಉದ್ಘಾಟಿಸಲಿದ್ದಾರೆ. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಸಿ.ಜಿ.ಕುಶಾಲಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಶಭಾನ ಎಂ.ಶೇಖ್ ಪಾಲ್ಗೊಳ್ಳಲಿದ್ದು, ಕೃಷಿಕ ಅಂಚೆಮನೆ ಸುಧಿಕುಮಾರ್ ರೈತರ ಅನಿಸಿಕೆಗಳನ್ನು ಪ್ರಸ್ತಾಪಿಸಲಿದ್ದಾರೆ.