ಬಿ.ಎಲ್. ಜಿನರಾಳಕರ್

ಮಡಿಕೇರಿ, ಡಿ. ೧೨: ದೇಶದಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಆಗಬೇಕಾದರೆ, ಸಮಾಜದಲ್ಲಿ ಸಮಾನತೆ ಇರಬೇಕು ಮತ್ತು ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮಾನವ ಹಕ್ಕು ಬಗ್ಗೆ ಪ್ರತಿಯೊಬ್ಬರಲ್ಲಿಯೂ ತಿಳುವಳಿಕೆ ಇರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿ.ಎಲ್. ಜಿನರಾಳಕರ ಹೇಳಿದರು.

ಜಿಲ್ಲಾ ಕಾನೂನು ಸೇವಾ ಬಿ.ಎಲ್. ಜಿನರಾಳಕರ್

ಮಡಿಕೇರಿ, ಡಿ. ೧೨: ದೇಶದಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಆಗಬೇಕಾದರೆ, ಸಮಾಜದಲ್ಲಿ ಸಮಾನತೆ ಇರಬೇಕು ಮತ್ತು ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮಾನವ ಹಕ್ಕು ಬಗ್ಗೆ ಪ್ರತಿಯೊಬ್ಬರಲ್ಲಿಯೂ ತಿಳುವಳಿಕೆ ಇರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿ.ಎಲ್. ಜಿನರಾಳಕರ ಹೇಳಿದರು.

ಜಿಲ್ಲಾ ಕಾನೂನು ಸೇವಾ ಮಾನವ ಹಕ್ಕುಗಳಿಗೆ ಸಂಬAಧಿಸಿದAತೆ ಜೀವನ ಸ್ವಾತಂತ್ರö್ಯ ಮತ್ತು ಘನತೆಯನ್ನು ಗೌರವಿಸುವುದು ಮತ್ತು ರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಸಾಮಾಜಿಕ, ರಾಜಕೀಯ ಸಂವಿಧಾನ ಬದ್ಧ ಹಕ್ಕುಗಳನ್ನು ಗೌರವಿಸಬೇಕಿದೆ. ಜೊತೆಗೆ ರಕ್ಷಣೆ ಮಾಡಬೇಕಾದುದು ಅವಶ್ಯಕವಾಗಿದೆ ಎಂದು ಅವರು ಹೇಳಿದರು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕೆ.ಡಿ. ದಯಾನಂದ ಮಾತನಾಡಿ, ಹುಟ್ಟಿದ ಪ್ರತಿಯೊ ಬ್ಬರಿಗೂ ಜೀವಿಸುವ ಹಕ್ಕಿದೆ. ಜೀವಿಸುವ ಹಕ್ಕು ಮಾನವ ಹಕ್ಕುಗಳಲ್ಲಿ ಒಂದಾಗಿದ್ದು, ಅದನ್ನು ಸಮರ್ಪ ಕವಾಗಿ ಗೌರವಯುತವಾಗಿ ನಡೆಸಲು ನಮಗೆ ಸಂವಿಧಾನವು ಅನುಮತಿ ನೀಡಿದೆ. ಪ್ರತಿಯೊಬ್ಬ ನಾಗರಿಕರೂ ಗೌರವಯುತವಾಗಿ ಬದುಕು ನಡೆಸಬೇಕು ಎಂಬುದು ಮಾನವ ಹಕ್ಕುಗಳ ಆಶಯವಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳು ಮತ್ತು ವಕೀಲ ಎಂ.ಎ. ನಿರಂಜನ್ ಮಾತನಾಡಿ, ಇಂದಿನ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮುಂದಿನ ಸಂಘರ್ಷಕ್ಕೆ ದಾರಿಯಾಗುತ್ತದೆ. ಮಾನವ ಹಕ್ಕು ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು ಎಂದರು.

ದೇಶದಲ್ಲಿ ಸಾಮಾಜಿಕ, ರಾಜಕೀಯ ಸಂವಿಧಾನ ಬದ್ಧ ಹಕ್ಕುಗಳನ್ನು ಗೌರವಿಸಬೇಕಿದೆ. ಜೊತೆಗೆ ರಕ್ಷಣೆ ಮಾಡಬೇಕಾದುದು ಪ್ರತಿಯೊಬ್ಬರ ಕರ್ತವ್ಯ. ರಾಷ್ಟç ಮತ್ತು ರಾಜ್ಯ ಮಾನವ ಹಕ್ಕು ಆಯೋಗದ ಜೊತೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಮಾನವ ಹಕ್ಕು ನ್ಯಾಯಾಲಯ ಇದ್ದು, ಮಾನವ ಹಕ್ಕು ಉಲ್ಲಂಘನೆಯಾದಲ್ಲಿ ದೂರು ನೀಡಬಹುದು ಎಂದು ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣ್ಯ ಅವರು ಅಸಮಾನತೆಯನ್ನು ತೊಲಗಿಸೋಣ ಮತ್ತು ಮಾನವ ಹಕ್ಕುಗಳನ್ನು ಎತ್ತಿ ಹಿಡಿಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ಕಾನೂನಿನಿಂದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಸಂಪೂ ರ್ಣವಾಗಿ ತಡೆಯಲು ಸಾಧ್ಯವಿಲ್ಲ. ನಮ್ಮ ಮನಃಪರಿವರ್ತನೆಯ ಹೊರತಾಗಿ ಬದಲಾವಣೆ ಸಾಧ್ಯವಿಲ್ಲ. ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮತ್ತು ಅದನ್ನು ಸಂರಕ್ಷಿಸುವ ಕಾರ್ಯ ನಮ್ಮಿಂದ ಅಗಬೇಕಿದೆ ಎಂದು ಅವರು ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ರೂಪ ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ. ಮನು, ಅಪರ ಸಿವಿಲ್ ನ್ಯಾಯಾಧೀಶೆ ಸ್ಮಿತಾ ನಾಗಲಾಪುರ, ಪ್ರದೀಪ್ ಇತರರು ಇದ್ದರು. ಮೀನಾ ನಿರೂಪಿಸಿ, ಬಿ.ಕೆ. ರೋಹಿಣಿ ಪ್ರಾರ್ಥಿಸಿ, ಸ್ವಾಗತಿಸಿದರು, ಡಿ.ಕೆ. ರಾಜೇಶ್ ವಂದಿಸಿದರು.