ಕೂಡಿಗೆ, ಡಿ. ೧೨: ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿರುವ ತೋಟಗಾರಿಕೆ ಕ್ಷೇತ್ರದ ಆವರಣದಲ್ಲಿ ಹೆಬ್ಬಾವು ಪತ್ತೆಯಾದ ಹಿನ್ನೆಲೆಯಲ್ಲಿ ಅದನ್ನು ಹಾರಂಗಿಯ ಹರೀಶ್ ರಕ್ಷಿಸಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಆತ್ತೂರು ಮೀಸಲು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.

ಈ ಸಂದರ್ಭದಲ್ಲಿ ಹಾರಂಗಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜ್ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.