ಮಡಿಕೇರಿ ಡಿ.೧೧ : ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ ಫೆಲೋಶಿಪ್ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
೨೦೨೧-೨೨ ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.೧೦ ಸಾವಿರದಂತೆ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
೨೦೨೧-೨೨ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧ ರೂ. ೪.೫೦ ಲಕ್ಷ, ಪ್ರವರ್ಗ-೨ಎ, ೨ಬಿ,೩ಎ,೩ಬಿ ರೂ.೩.೫೦ ಲಕ್ಷ ಆಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್, ೩೦ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್ ಇಡಿಡಿoಡಿ! ಊಥಿಠಿeಡಿಟiಟಿಞ ಡಿeಜಿeಡಿeಟಿಛಿe ಟಿoಣ vಚಿಟiಜ. ನೋಡಬಹುದು. ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪ (ಕಚೇರಿಯ ಕಾರ್ಯನಿರ್ವಹಿಸುವ ಸಮಯ ಬೆಳಗ್ಗೆ ೧೦.೦೦ ರಿಂದ ಸಂಜೆ ೫.೩೦ರವರೆಗೆ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.