ಕರ್ನಾಟಕದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ
ಬೆಂಗಳೂರು, ಡಿ. ೧೨: ಕರ್ನಾಟಕದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ ಭಾನುವಾರ ಪತ್ತೆಯಾಗಿದೆ. ಖುದ್ದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೇ ಅದನ್ನು ದೃಢಪಡಿಸಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ೫ ಮಂದಿ ಹಾಗೂ ದ್ವಿತೀಯ ಮಟ್ಟದಲ್ಲಿ ೧೫ ಮಂದಿ ಸಂಪರ್ಕಕ್ಕೆ ಬಂದಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ ೩೪ ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದ್ದು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
ಹ್ಯಾಕ್ ಆದ ಪ್ರಧಾನಿ ಟ್ವಿಟರ್ ಖಾತೆ
ನವದೆಹಲಿ, ಡಿ. ೧೨: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧಿಕೃತ ಟ್ವಿಟರ್ ಖಾತೆ ಕೆಲ ಹೊತ್ತು ಹ್ಯಾಕ್ ಆಗಿ ಮತ್ತೆ ಸರಿಯಾದ ಪ್ರಸಂಗ ಭಾನುವಾರ ನಸುಕಿನ ಜಾವ ನಡೆದಿದೆ. ಡಿಸೆಂಬರ್ ೧೧ ರ ಮಧ್ಯರಾತ್ರಿ ಕಳೆದು ೨.೨೪ರ ಹೊತ್ತಿಗೆ ನರೇಂದ್ರ ಮೋದಿಯವರ ಅಧಿಕೃತ ಖಾತೆಯಿಂದ ಒಂದು ಟ್ವೀಟ್ ಆಗಿತ್ತು. ಅದರಲ್ಲಿ ದೇಶ, ಬಿಟ್ ಕಾಯಿನ್ನ್ನು ಕಾನೂನುಬದ್ಧಗೊಳಿಸಿದೆ, ಸರ್ಕಾರವೇ ಅಧಿಕೃತವಾಗಿ ೫೦೦ ಬಿಟ್ ಕಾಯಿನ್ಗಳನ್ನು ಖರೀದಿಸಿದ್ದು ದೇಶವಾಸಿಗಳಿಗೆ ಹಂಚಲಾಗುತ್ತದೆ ಎಂದು ಟ್ವೀಟ್ ಮಾಡಲಾಗಿತ್ತು. ಪ್ರಧಾನಿ ಮೋದಿಯವರ ಟ್ವೀಟ್ ಖಾತೆಯಲ್ಲಿ ಪೋಸ್ಟ್ ಆದ ಸೆಕೆಂಡ್ಗಳಲ್ಲಿಯೇ ಇದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಯಿತು. ಸ್ವತಃ ಪ್ರಧಾನಿಯವರ ಟ್ವೀಟ್ ಖಾತೆಯಿಂದ ಇದು ಪೋಸ್ಟ್ ಆಗಿದೆ ಎಂದರೆ ಕೇಳಬೇಕೆ ಕೆಲವೇ ನಿಮಿಷಗಳಲ್ಲಿ ಸುದ್ದಿಯಾಯಿತು. ಹಲವರಿಗೆ ಇದರ ಬಗ್ಗೆ ಅನುಮಾನ ವ್ಯಕ್ತವಾಗಿ ಬಹುಶಃ ಹ್ಯಾಕ್ ಆಗಿರಬೇಕು ಎಂದು ಭಾವಿಸಿದರು. ಇನ್ನು ಕೆಲವರು, ೫೦೦ ಮತ್ತು ಸಾವಿರ ರೂಪಾಯಿ ನೋಟುಗಳನ್ನು ಬ್ಯಾನ್ ಮಾಡಿದ ಇತ್ತೀಚೆಗೆ ಕೋವಿಡ್-೧೯ ಲಾಕ್ಡೌನ್ ಸಂದರ್ಭದಲ್ಲಿ ಹಲವು ಅನಿರೀಕ್ಷಿತ ಘೋಷಣೆಗಳನ್ನು ಮಾಡಿದ ಪ್ರಧಾನಿಯವರು ಒಂದು ವೇಳೆ ಬಿಟ್ ಕಾಯಿನ್ ನ್ನು ದೇಶದಲ್ಲಿ ಕಾನೂನುಬದ್ಧಗೊಳಿಸಿರಲೂಬಹುದು ಎಂದು ಭಾವಿಸಿದರು. ಇದಾಗಿ ಒಂದೇ ಗಂಟೆಗಳಲ್ಲಿ ಪ್ರಧಾನ ಮಂತ್ರಿ ಕಾರ್ಯಾಲಯ ಪ್ರತಿಕ್ರಿಯೆ ನೀಡಿ ಪ್ರಧಾನಿಯವರ ಟ್ವೀಟ್ ಖಾತೆ ಹ್ಯಾಕ್ ಆಗಿತ್ತು, ಈಗ ಸರಿಯಾಗಿದೆ, ಆಗ ಮಾಡಿದ್ದ ಟ್ವೀಟ್ಗಳೆಲ್ಲ ನಿಜವಲ್ಲ ಎಂದು ಸ್ಪಷ್ಟನೆ ನೀಡಿತು.
ಆನೆಕಲ್ನಲ್ಲಿ ಜೋಡಿ ಕೊಲೆ
ಆನೇಕಲ್, ಡಿ. ೧೨: ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ನಲ್ಲಿ ನಿನ್ನೆ ರಾತ್ರಿ ನಡೆದಿರುವ ಜೋಡಿ ಕೊಲೆ ಪ್ರಕರಣ ಬೆಚ್ಚಿ ಬೀಳಿಸಿದೆ. ಅನೈತಿಕ ಸಂಬAಧಕ್ಕೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಹೆಣವಾಗಿ ಹೋಗಿದ್ದಾನೆ. ತಾಲೂಕಿನ ಚಂದಾಪುರದಲ್ಲಿ ಈ ಪ್ರಕರಣ ನಡೆದಿದ್ದು, ಪಕ್ಷವೊಂದರ ಮುಖಂಡ ಚಿಕ್ಕಹಾಗಡೆ ನಾರಾಯಣಸ್ವಾಮಿ ತನ್ನ ಪ್ರೇಯಸಿ ಕಾವ್ಯಳೊಂದಿಗೆ ಬಾಡಿಗೆ ಮನೆಯಲ್ಲಿದ್ದ ವೇಳೆ ಹತ್ಯೆ ಮಾಡಲಾಗಿದೆ. ಇಬ್ಬರು ಮನೆಯಲ್ಲಿದ್ದ ವೇಳೆ ರೊಚ್ಚಿಗೆದ್ದ ಕಾವ್ಯಳ ಗಂಡ ಇಬ್ಬರÀನ್ನು ಕೊಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಸೂರ್ಯ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಕೆ ಡಾಭಾ ಎದುರಿನ ರಸ್ತೆಯ ಪಕ್ಕದಲ್ಲಿ ಶೀಟ್ ಮನೆಯಲ್ಲಿ ಇಬ್ಬರು ಇದ್ದರು ಎಂದು ತಿಳಿದು ಬಂದಿದೆ. ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ನಾರಾಯಣಸ್ವಾಮಿಯನ್ನು ಬಾಗಿಲ ಹತ್ತಿರ ಕೊಲೆ ಮಾಡಲಾಗಿದ್ದು, ಒಳಗಡೆ ಆತನ ಪ್ರೇಯಸಿ ಕಾವ್ಯಳನ್ನ ಹತ್ಯೆ ಮಾಡಲಾಗಿದೆ. ಅಕ್ರಮ ಸಂಬAಧಕ್ಕಾಗಿ ಈ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಘಟನಾ ಸ್ಥಳಕ್ಕೆ ಎಎಸ್ಪಿ ಲಕ್ಷಿö್ಮ ಗಣೇಶ್, ಡಿವೈಎಸ್ಪಿ ಎಂ. ಮಲ್ಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣಕ್ಕೆ ಸಂಬAಧಿಸಿದAತೆ ದೂರು ದಾಖಲಾಗಿದೆ.
ಮತಾಂತರ ನಿಷೇಧ ಕಾಯ್ದೆಯಿಂದ ಪ್ರಯೋಜನ-ಸಿಎಂ
ಹುಬ್ಬಳ್ಳಿ, ಡಿ. ೧೨: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಹಲವು ಮಠಾಧೀಶರು ಮತ್ತು ಹಿಂದೂಪರ ಸಂಘಟನೆಗಳು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದರೆ, ಮತಾಂತರ ನಿಷೇಧ ಕಾನೂನು ತರಬಾರದು ಎಂದು ಹಲವು ಕ್ರೆöÊಸ್ತ ಮಿಷನರಿಗಳು, ಪಾದ್ರಿಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಈ ಕುರಿತು ಮುಖ್ಯಮಂತ್ರಿಗಳನ್ನು ಸಹ ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮತಾಂತರ ನಿಷೇಧ ಕಾಯ್ದೆ ಕರಡಿಗೆ ಒಪ್ಪಿಗೆ ನೀಡಿ ಅದನ್ನು ನಾವು ಅಧಿವೇಶನದಲ್ಲಿ ತರುತ್ತೇವೆ ಎಂದಿದ್ದಾರೆ. ಕ್ರೈಸ್ತ, ಮುಸ್ಲಿಂ, ಬೌದ್ಧ, ಸಿಖ್ ಧರ್ಮದವರಿಗೆ ಈ ಬಗ್ಗೆ ಆತಂಕ ಬೇಡ ಎಂದು ಕೂಡ ಸಿಎಂ ಹೇಳಿದ್ದಾರೆ. ಮತಾಂತರ ಸಮಾಜಕ್ಕೆ ಎಷ್ಟು ಮಾರಕ ಎಂಬ ಬಗ್ಗೆ ವ್ಯಾಖ್ಯಾನ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕ್ರೆöÊಸ್ತ, ಮುಸಲ್ಮಾನ, ಸಿಖ್, ಬೌಧ್ಧ, ಹಿಂದೂ ಹೀಗೆ ಈ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ಗುರುತು ಪಡೆದಿರುವ ಧರ್ಮಗಳು. ಅವುಗಳಿಗೆ, ಆ ಜನಾಂಗದವರಿಗೆ ಯಾವುದೇ ಆತಂಕ ಬೇಡ, ಅವರ ಪ್ರಾರ್ಥನೆ, ಅವರ ಧರ್ಮ, ನಂಬಿಕೆಗಳಿಗೆ ಯಾವುದೇ ಅಡ್ಡಿಯಾಗುವುದಿಲ್ಲ, ಆದರೆ ಬಡತನ, ಜನರ ಕಷ್ಟದ ಪರಿಸ್ಥಿತಿಯನ್ನು ದುರುಪಯೋಗ ಮಾಡಿಕೊಂಡು ಆಸೆ, ಆಮಿಷಗಳನ್ನೊಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ. ಆದ್ದರಿಂದ ಈ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಈ ಚರ್ಚೆಯ ಸ್ವರೂಪದಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಾನೂನು ಜಾರಿಗೆ ಬಂದಿದೆ ಎಂದರು. ಎಲ್ಲವನ್ನೂ ಅವಲೋಕನ ಮಾಡಿ ಕರ್ನಾಟಕದಲ್ಲಿ ಕೂಡ ಕಾನೂನು ತರಬೇಕೆಂದು ಬಹುಜನರ ಅಪೇಕ್ಷೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಇಲಾಖೆಯ ಪರಿಶೀಲನಾ ಸಮಿತಿ ಪರಿಶೀಲನೆ ಮಾಡಿ ಸಂಪುಟಕ್ಕೆ ತರಲಾಗುತ್ತದೆ. ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ಮುಂದಾಗುತ್ತೇವೆ ಎಂದರು.
ಕ್ಯಾ. ವರುಣ್ ಸಿಂಗ್ ಆರೋಗ್ಯ ಸ್ಥಿತಿ ವಿಚಾರಿಸಿದ ಗೃಹ ಸಚಿವ
ಬೆಂಗಳೂರು, ಡಿ. ೧೨: ಇತ್ತೀಚಿಗೆ ತಮಿಳುನಾಡಿನ ಕುನೂರು ಬಳಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಪಡೆಯುತ್ತಿರುವ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಕಮಾಂಡ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ವರುಣ್ ಸಿಂಗ್ ಅವರ ಆರೋಗ್ಯ ಪರಿಸ್ಥಿತಿ ಕುರಿತಂತೆ ವಿಚಾರಿಸಿದರು. ವರುಣ್ ಸಿಂಗ್ ಅವರ ಪೋಷಕರೊಂದಿಗೂ ಮಾತುಕತೆ ನಡೆಸಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಈ ಸಂದರ್ಭದಲ್ಲಿ ಗೃಹ ಸಚಿವರ ಜೊತೆಯಲ್ಲಿದ್ದರು. ತಮಿಳುನಾಡಿನ ಕುನೂರು ಬಳಿ ಕಳೆದ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತಿತರ ೧೧ ಮಂದಿ ಮೃತಪಟ್ಟಿದ್ದರು. ಈ ದುರಂತದಲ್ಲಿ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದು, ಅವರನ್ನು ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಿಂದ ಗುರುವಾರ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ತುರ್ತು ಭೂಸ್ಪರ್ಶ - ತನಿಖೆಗೆ ಆದೇಶ
ನವದೆಹಲಿ, ಡಿ. ೧೨: ನಾಗರಿಕ ವಿಮಾನಯಾನ ನಿಯಂತ್ರಕ ನಿರ್ದೇಶನಾಲಯ (ಡಿಜಿಸಿಎ) ತುರ್ತು ಭೂಸ್ಪರ್ಶ ಮಾಡಿದ ಸ್ಪೆöÊಸ್ ಜೆಟ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಪ್ರಕರಣದ ತನಿಖೆಗೆ ಆದೇಶ ನೀಡಿದೆ. ಗುರುವಾರ ಸ್ಪೆöÊಸ್ ಜೆಟ್ನ ವಿಮಾನ ಮುಂಬೈ ಅಂರ್ರಾಷ್ಟಿçÃಯ ವಿಮಾನ ನಿಲ್ದಾನದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಬೋಯಿಂಗ್ ಸಂಸ್ಥೆಯ ವಿಮ್ಯಾಕ್ಸ್ ಎನ್ನುವ ಸರಣಿಗೆ ಸೇರಿದ ಈ ವಿಮಾನದ ಎಂಜಿನ್ನಲ್ಲಿ ದೋಷ ಕಾಣಿಸಿಕೊಂಡಿತ್ತು. ಕೊರೊನಾ ಹಿನ್ನೆಲೆ ಎರಡೂವರೆ ವರ್ಷಗಳ ಕಾಲ ಸ್ಥಗಿತಗೊಂಡಿದ್ದ ವಿಮಾನಯಾನ ಕ್ಷೇತ್ರ ಸಹಜ ಸ್ಥಿತಿಗೆ ಮರಳುತ್ತಿರುವ ಸಮಯದಲ್ಲೇ ಈ ಪ್ರಕರಣ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.