ಶನಿವಾರಸಂತೆ, ಡಿ. ೧೨: ಪಟ್ಟಣದ ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೮, ೯, ೧೦ನೇ ತರಗತಿಯ ವಿದ್ಯಾರ್ಥಿಗಳಿಂದ ಮಾರುಕಟ್ಟೆ ಹಾಗೂ ಅಂಕಪಟ್ಟಿ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳು ಅವರ ಮನೆಯಂಗಳದಲ್ಲಿ ಬೆಳೆದ ಹಣ್ಣು ಹಂಪಲು, ತರಕಾರಿಗಳನ್ನು ಹಾಗೂ ಮನೆಯಲ್ಲೇ ತಯಾರಿಸಿದ ತಿಂಡಿ ತಿನಿಸುಗಳನ್ನು ಮಾರಾಟ ಮಾಡಲು ಶಾಲಾ ಆವರಣದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ೨ ವರ್ಷಗಳ ಕೋವಿಡ್ ಲಾಕ್ಡೌನ್ ಅವಧಿಯ ನಂತರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಲವಲವಿಕೆಯಿಂದ ವ್ಯಾಪಾರ ವಹಿವಾಟು ನಡೆಸಿದರು. ಪೋಷಕರು ಅಗತ್ಯ ವಸ್ತುಗಳನ್ನು ಖರೀದಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.
ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಡಿ. ಸುಜಲಾದೇವಿ ಮಾತನಾಡಿ, ಮಕ್ಕಳ ಸಾಮಾನ್ಯ ಜ್ಞಾನದ ಬೆಳವಣಿಗೆ ಹಾಗೂ ವ್ಯಾವಹಾರಿಕ ಚಟುವಟಿಕೆಗೆ ಪೂರಕವಾಗುವ ದೃಷ್ಟಿಯಿಂದ ಮಾರಾಟ ಮಾರುಕಟ್ಟೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಸAಸ್ಥೆಯ ಕಾರ್ಯದರ್ಶಿ ಗುರುಪ್ರಸಾದ್, ನಿರ್ದೇಶಕರು, ಶಿಕ್ಷಕರು, ಪೋಷಕರು ಹಾಜರಿದ್ದರು.
ಮಕ್ಕಳ ಮಾರುಕಟ್ಟೆ