ಮಡಿಕೇರಿ, ಡಿ. ೧೧: ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿ ರಾಷ್ಟಿçÃಯ ಸೇವಾ ಯೋಜನಾ ಘಟಕ, ರೆಡ್‌ಕ್ರಾಸ್, ರೆಡ್‌ರಿಬ್ಬನ್ ಕ್ಲಬ್ ಮತ್ತು ಆರೋಗ್ಯ ಇಲಾಖೆ, ಆಶ್ರಯದಲ್ಲಿ ತಾ. ೮ ರಂದು ಕಾಲೇಜಿನ ಸಭಾಂಗಣದಲ್ಲಿ ೧೮ ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮೊದಲ ಡೋಸ್ ಮತ್ತು ಮೊದಲ ಡೋಸ್ ಪಡೆದ ವಿದ್ಯಾರ್ಥಿಗಳಿಗೆ ಎರಡನೆಯ ಡೋಸ್ ನೀಡುವ ಕೋವಿಡ್ ನಿರೋಧಕ ಲಸಿಕಾ ಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ವಿದ್ಯಾರ್ಥಿಗಳು ಕೋವಿಡ್ ಲಸಿಕಾಕರಣ ಕಾರ್ಯಕ್ರಮದ ಸದುಪಯೋಗಪಡಿಸಿಕೊಂಡರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ, ಕೋವಿಡ್ ಜಿಲ್ಲಾ ನೋಡಲ್ ಅಧಿಕಾರಿ ಡಾ. ದಯಾನಂದ ಕೆ.ಸಿ. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರಕಾಶ್ ಎಂ.ಎನ್. ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.