ಪೊನ್ನAಪೇಟೆ, ಡಿ. ೧೨: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಜಿಲ್ಲಾ ಘಟಕ ಮತ್ತು ಪೊನ್ನಂಪೇಟೆ ಮಾಜಿ ಸೈನಿಕರ ಸಂಘದ ವತಿಯಿಂದ ಪೊನ್ನಂಪೇಟೆ ಬಸ್ ನಿಲ್ದಾಣದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಪತ್ನಿ ಹಾಗೂ ಮಡಿದ ಇತರ ಸೇನಾಪಡೆಯ ಸೇನಾಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾ ಅಧ್ಯಕ್ಷ ಕೊಟ್ಟ್ಕತ್ತಿರ ಸೋಮಣ್ಣ, ಪೊನ್ನಂಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಐನಂಡ ಮಂದಣ್ಣ, ಪೊನ್ನಂಪೇಟೆ ನಾಗರಿಕ ವೇದಿಕೆಯ ಪ್ರಮುಖರಾದ ಮೂಕಳೆರ ಕುಶಾಲಪ್ಪ, ಕಟ್ಟೆರ ಲಾಲಪ್ಪ, ಕಿಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಚಕ್ಕೆರ ಸನ್ನಿ ಸುಬ್ಬಯ್ಯ, ಕಾರ್ಯದರ್ಶಿ ಕಾಟಿಮಾಡ ಜಿಮ್ಮಿ ಅಣ್ಣಯ್ಯ, ಕಾವೇರಿ ಸಂಘದ ಅಧ್ಯಕ್ಷ ಮದ್ರಿರ ಸೋಮಯ್ಯ, ಹಲವು ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಮಾಜಿ ಸೈನಿಕರು, ಸಾರ್ವಜನಿಕರು ಭಾಗವಹಿಸಿದ್ದರು.
ಗೋಣಿಕೊಪ್ಪ: ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಇತರ ಯೋಧರಿಗೆ ಕೋಣನಕಟ್ಟೆ ಗ್ರಾಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸ್ಥಳೀಯರಾದ ಸಣ್ಣುವಂಡ ರಮೇಶ್, ಚೆಪ್ಪುಡೀರ ಕಿಟ್ಟು ಅಯ್ಯಪ್ಪ ಪಾಲ್ಗೊಂಡಿದ್ದರು.